ಬಿಹಾರದಲ್ಲಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿರುವುದನ್ನು ವಿರೋಧಿಸಿ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಡಿಎಂಕೆ ಪಕ್ಷದ ಕನಿಮೋಳಿ ಸೇರಿದಂತೆ ಹಲವು ಸಂಸದರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಸಂಸತ್ತಿನ ಮೆಟ್ಟಿಲುಗಳ ಮೇಲೆ ಕೂತು ವಿರೋಧ ಪಕ್ಷದ ಸಂಸದರು ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಘೋಷಣೆಗಳನ್ನು ಕೂಗಿದರು.
ಕಾಂಗ್ರೆಸ್, ಸಮಾಜವಾದಿ ಪಕ್ಷ, ಆರ್ಜೆಡಿ, ಟಿಎಂಸಿ, ಡಿಎಂಕೆ, ಜೆಎಂಎಂ ಮತ್ತು ಇತರರು ಸೇರಿದಂತೆ ಹಲವಾರು ವಿರೋಧ ಪಕ್ಷಗಳ ಸದಸ್ಯರು ಮಂಗಳವಾರ ಸಂಸತ್ತಿನಲ್ಲಿ ಪ್ರತಿಭಟನೆ ನಡೆಸಿದರು.