Tuesday, July 16, 2024

ಸತ್ಯ | ನ್ಯಾಯ |ಧರ್ಮ

ಇಂದಿನಿಂದ ವಿಧಾನ ಮಂಡಲ ಅಧಿವೇಶನ: ಕಾಂಗ್ರೆಸ್ ಕಟ್ಟಿ ಹಾಕಲು ಪ್ರತಿಪಕ್ಷಗಳ ತಂತ್ರಗಾರಿಕೆ

ಇಂದಿನಿಂದ ರಾಜ್ಯದ 16ನೇ ವಿಧಾನಸಭೆಯ 4ನೇ ಮುಂಗಾರು ಅಧಿವೇಶನ ನಡೆಯಲಿದೆ. ಜುಲೈ 26 ರ ವರೆಗೂ ನಡೆಯಲಿರುವ ಅಧಿವೇಶನದಲ್ಲಿ ಈ ಬಾರಿ ಮುಡಾ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ, ವಾಲ್ಮೀಕಿ ನಿಗಮದಲ್ಲಿನ 187 ಹಗರಣ ಆರೋಪದ ಮೂಲಕ ಆಡಳಿತ ಪಕ್ಷ ಕಾಂಗ್ರೆಸ್ ನ್ನು ಕಟ್ಟಿ ಹಾಕಲು ಪ್ರತಿಪಕ್ಷಗಳು ಸಜ್ಜಾಗಿವೆ.

ಇದೆ ವಿಚಾರ ಮುಂದಿಟ್ಟು ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ಜಂಟಿ ಹೋರಾಟಕ್ಕೆ ಸಜ್ಜಾಗಿವೆ. ಅಧಿವೇಶನದಲ್ಲಿ ಮುಡಾ ಸೈಟ್ ಹಂಚಿಕೆ, ವಾಲ್ಮೀಕಿ ಅಕ್ರಮವನ್ನೇ ಪ್ರಧಾನವಾಗಿ ಪ್ರಸ್ತಾಪಿಸಲು ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ನಿರ್ಧರಿಸಿವೆ.

ಪ್ರಮುಖವಾಗಿ ಇವೆರಡು ಅಕ್ರಮಗಳ ತನಿಖೆ ವಿಚಾರ ಒಂದು ತಾರ್ಕಿಕ ಹಂತಕ್ಕೆ ತಲುಪಿಸುವ ವರೆಗೂ ಪ್ರತಿಪಕ್ಷಗಳು ವಿಧಾನಸೌಧದ ಒಳಗೂ ಹೊರಗೂ ಆಡಳಿತ ಪಕ್ಷವನ್ನು ತೀವ್ರ ಮುಜುಗರಕ್ಕೆ ಸಿಕ್ಕಿಸಲು ಪ್ರತಿಪಕ್ಷಗಳು ಸಜ್ಜಾಗಿವೆ. ಇದಷ್ಟೇ ಅಲ್ಲದೇ ಪರಿಶಿಷ್ಟ ಜಾತಿಗೆ ಮೀಸಲಿಟ್ಟಿದ್ದ ಹಣ ಗ್ಯಾರಂಟಿಗೆ ಬಳಕೆ, ಬೆಲೆ ಏರಿಕೆ, ಡೆಂಘೀ ನಿರ್ಲಕ್ಷ್ಯವನ್ನು ಪ್ರಸ್ತಾಪಿಸಲು ನಿರ್ಧರಿಸಲಾಗಿದೆ.

ಸದನದಲ್ಲಿ ಯಾವುದೇ ವಿಷಯಕ್ಕೆ ಆರಂಭದಲ್ಲೇ ಪ್ರತಿಭಟನೆ ಮಾಡದಿರಲು ಪ್ರತಿಪಕ್ಷಗಳು ನಿರ್ಧರಿಸಿವೆ. ವಿಷಯಗಳನ್ನು ಪ್ರಸ್ತಾಪಿಸಿದ ಬಳಿಕವೇ ಕೊನೆಯಲ್ಲಿ ಪ್ರತಿಭಟನೆ ಮಾಡಲು ತಂತ್ರ ರೂಪಿಸಿವೆ. ಹೀಗಾಗಿ ಅಧಿವೇಶನಕ್ಕೆ ತೊಡಕು ಮಾಡುವ ಆರೋಪದಿಂದ ಹೊರಗಿರಲು ಪ್ರತಿಪಕ್ಷಗಳು ತೀರ್ಮಾನಿಸಿವೆ

ಕಾಂಗ್ರೆಸ್ ಪ್ರತಿತಂತ್ರ
ಬಿಜೆಪಿ ಸರ್ಕಾರದ ಅವಧಿಯ ಭ್ರಷ್ಟಾಚಾರದ ಆರೋಪಗಳನ್ನ ಮುಂದಿಟ್ಟುಕೊಂಡು ತಿರುಗೇಟು ನೀಡಲು ಸರ್ಕಾರ ಚಿಂತನೆ ನಡೆಸಿದೆ. ಜೊತೆಗೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಆರೋಪ, ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಶೇ 40 ಕಮಿಷನ್ ಆರೋಪ, ಕೊರೊನಾ ಕಾಲದ ಹಗರಣ, ಬಿಟ್ ಕಾಯಿನ್ ಹಗರಣ ಹಾಗೂ ದೇವರಾಜ ಅರಸು ಟ್ರಕ್ ಟರ್ಮಿನಲ್​​​ನಲ್ಲಿ 47ಕೋಟಿ ರೂಪಾಯಿ ಹಗರಣದಲ್ಲಿ ಬಿಜೆಪಿಯ ಮಾಜಿ ಶಾಸಕ ವೀರಯ್ಯನನ್ನು ಬಂಧಿಸಲಾಗಿದೆ. ಈ ವಿಚಾರಗಳನ್ನು ಪ್ರಸ್ತಾಪಿಸಿ ವಿಪಕ್ಷಗಳಿಗೆ ತಿರುಗೇಟು ನೀಡುವ ಸಾಧ್ಯತೆ ಇದೆ.

Related Articles

ಇತ್ತೀಚಿನ ಸುದ್ದಿಗಳು