ಬೆಂಗಳೂರು: ಜೈಲಿನಲ್ಲಿರುವ ಕನ್ನಡ ನಟ ದರ್ಶನ್ ತೂಗುದೀಪ ಮತ್ತು ಇತರ ಐವರು ಕೊಲೆ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಕೆಳ ನ್ಯಾಯಾಲಯವು ಸೋಮವಾರ ಪ್ರಕಟಿಸಲಿದೆ.
ಎರಡೂ ಕಡೆಯ ವಾದಗಳನ್ನು ಆಲಿಸಿದ 57ನೇ ಸಿಸಿಎಚ್ ನ್ಯಾಯಾಲಯದ ನ್ಯಾಯಾಧೀಶ ಜೈಶಂಕರ್ ಅವರು ದರ್ಶನ್, ಅವರ ಸ್ನೇಹಿತೆ ಪವಿತ್ರಾ ಗೌಡ ಮತ್ತು ಸಹಚರರಾದ ರವಿಶಂಕರ್, ನಾಗರಾಜ್, ಲಕ್ಷ್ಮಣ್ ಮತ್ತು ದೀಪಕ್ ಸಲ್ಲಿಸಿದ್ದ ಜಾಮೀನು ಅರ್ಜಿಗಳ ಭವಿಷ್ಯವನ್ನು ಇಂದು ನಿರ್ಧರಿಸಲಿದ್ದಾರೆ.
ಇವರೆಲ್ಲರ ಮೇಲೂ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎನ್ನುವ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪವಿದೆ.
ಜೂನ್ 11ರಂದು ದರ್ಶನ್ ಅವರನ್ನು ಬಂಧಿಸಲಾಗಿದ್ದು, ಪ್ರಸ್ತುತ ಬಳ್ಳಾರಿ ಜೈಲಿನಲ್ಲಿ ಇರಿಸಲಾಗಿದೆ. ಸೆಪ್ಟೆಂಬರ್ 21ರಂದು ಅವರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು.
ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಮತ್ತು ಪವಿತ್ರಾ ಪರ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಿದರು.
ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಪಿ) ಪಿ ಪ್ರಸನ್ನ ಕುಮಾರ್ ಅವರು ಆರೋಪಿಗಳಿಗೆ ಜಾಮೀನು ನೀಡುವುದನ್ನು ವಿರೋಧಿಸಿ ಆಕ್ಷೇಪಣೆ ಸಲ್ಲಿಸಿದ್ದಾರೆ.