Monday, October 13, 2025

ಸತ್ಯ | ನ್ಯಾಯ |ಧರ್ಮ

ಹಾಸನಾಂಬ ಜಾತ್ರೆ : ಎಲ್ಲಾ ಪಾಸ್ ಗಳನ್ನು ರದ್ದುಗೊಳಿಸಿ ಆದೇಶ

ಹಾಸನ : ಹಾಸನಾಂಬ ಜಾತ್ರೆಗೆ ಭಕ್ತರ ಸಂಖ್ಯೆ ಹೆಚ್ಚಾಗಿ ಜನಜಂಗುಳಿ ಏರ್ಪಟ್ಟ ಹಿನ್ನೆಲೆಯಲ್ಲಿ ಹಾಸನಾಂಬ ಆಡಳಿತ ಮಂಡಳಿಯಿಂದ ಎಲ್ಲಾ ಪಾಸ್ ರದ್ದುಮಾಡಿ ಆದೇಶಿಸಿದೆ.

ಈಗಾಗಲೇ ಸರತಿ ಸಾಲಿನಲ್ಲಿ ನಿಂತ ಭಕ್ತರ ಹೊರತಾಗಿ ಬೇರೆ ಎಲ್ಲಾ ಪಾಸ್ ರದ್ದು ಮಾಡಿರುವುದಾಗಿ ತಿಳಿಸಿದೆ.

ಇದರ ಜೊತೆಗೆ ಹಾಸನಾಂಬೆ ದರ್ಶನಕ್ಕೆ ಈಗ ಮಳೆ ಅಡ್ಡಿಯಾಗಿದೆ. ಭಾರೀ ಮಳೆಯ ಕಾರಣದಿಂದ ಮಕ್ಕಳು, ಜನರು ಪರದಾಡುವಂತೆ ಆಗಿದೆ. ಅಲ್ಲದೇ ಭಕ್ತರನ್ನು ನಿಯಂತ್ರಣ ಮಾಡಲು ಪೊಲೀಸರು ಹರಸಾಹಸ ಪಡುವಂತೆ ಆಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page