ರಾಜ್ಯದಲ್ಲಿ ತೀವ್ರ ಬರಗಾಲದ ನಡುವೆಯೂ ರೈತರಿಗೆ 5 ಗಂಟೆಗಳ 3 ಫೇಸ್ ವಿದ್ಯುತ್ ಪೂರೈಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ವಿದ್ಯುತ್ ಪೂರೈಕೆ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸಂದೇಶ ನೀಡಿದ್ದಾರೆ.
ರಾಜ್ಯದಲ್ಲಿ ಲಭ್ಯವಿರುವ ವಿದ್ಯುತ್ ಸಮರ್ಪಕವಾಗಿ ಹಂಚಿಕೆಯಾಗಬೇಕು. ಈ ನಿಟ್ಟಿನಲ್ಲಿ ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರು ಹೆಚ್ಚಿನ ನಿಗಾ ವಹಿಸಿ ರೈತರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂಧನ ಇಲಾಖೆಯ ಉನ್ನತ ಮಟ್ಟದ ಸಭೆ ನಡೆಸಿದ ಮುಖ್ಯಮಂತ್ರಿಗಳು, ಬೇರೆ ರಾಜ್ಯಗಳಿಗೆ ವಿದ್ಯುತ್ ಮಾರಾಟ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಲಭ್ಯವಿರುವ ವಿದ್ಯುತ್ ಸಮರ್ಪಕವಾಗಿ ಹಂಚಿಕೆಯಾಗಬೇಕು. ಈ ನಿಟ್ಟಿನಲ್ಲಿ ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರು ಹೆಚ್ಚಿನ ನಿಗಾ ವಹಿಸಿ ರೈತರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.