Friday, June 20, 2025

ಸತ್ಯ | ನ್ಯಾಯ |ಧರ್ಮ

ಒಟಿಟಿಗೆ ಬಂತು ಭಟ್, ಗಣೇಶ್ ಸಿನಿಮಾ ಅಕ್ಟೋಬರ್ 5ಕ್ಕೆ ಜೀ 5 ನಲ್ಲಿ ಹಾರಲಿದೆ ಗಾಳಿಪಟ-2

ಜೀ5 ಒಟಿಟಿಗೆ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಗಾಳಿಪಟ-2’ ಎಂಟ್ರ ಆಗುತ್ತಿದೆ. ಇದೋ ಅಕ್ಟೋಬರ್ 5ರಂದು ಪ್ರೀಮಿಯರ್ ಆಗ್ತಿದೆ ಸಿನಿಮಾ.

ದಸರಾ ಹಬ್ಬದ ಧಮಾಕ ಅನ್ನೋ ಥರ ಜೀ5 ಒಟಿಟಿಗೆ ಯೋಗರಾಜ್ ಭಟ್ ಮತ್ತು ಗಣೇಶ್ ಕಾಂಬಿನೇಶನ್ನಿನ ‘ಗಾಳಿಪಟ-2’ ಪ್ರೇಕ್ಷಕರಿಗೆ ಲಭ್ಯವಾಗಲಿದೆ.

ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಯೋಗರಾಜ್ ಭಟ್ರು ಸಮಾಗಮಾದ ಗಾಳಿಪಟ 2 ಸಿನಿಮಾ ತೆರೆಮೇಲೆ ಮತ್ತೆ ಮೋಡಿ ಮಾಡಿತ್ತು. ಬಾಕ್ಸಾಫೀಸ್ ನಲ್ಲಿ ಭರ್ಜರಿ ಕಮಾಯಿ ಮಾಡಿದ್ದ ಈ ಚಿತ್ರಕ್ಕೆ ಸಿನಿಮಾ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆಗಸ್ಟ್ 12ರಂದು ರಾಜ್ಯ ಸೇರಿದಂತೆ ಹೊರ ರಾಜ್ಯ ಹಾಗೂ ವಿದೇಶಗಳಲ್ಲಿಯೂ ಹಾರಿದ್ದ ಗಾಳಿಪಟ 2 ಸಿನಿಮಾ ಹೊಸ ದಾಖಲೆ ಬರೆದಿತ್ತು. ಸ್ನೇಹ, ಪ್ರೇಮ, ವಿರಹ, ತ್ಯಾಗ, ಭಾವನೆಯ ಜೊತೆಗೆ ಒಂದಿಷ್ಟು ಮಸಾಲೆ ಸೇರಿಸಿ ಭಟ್ರು ತಯಾರಿಸಿದ್ದ ಸಿನಿಮಾ ಈಗ ಒಟಿಟಿಗೆ ಎಂಟ್ರಿ ಕೊಡಲು ಸಜ್ಜಾಗಿದೆ.

ಗಣೇಶ್ ಜೊತೆಗೆ  ದೂದ್ ಪೇಡ ದಿಗಂತ್ ಹಾಗೂ ನಿರ್ದೇಶಕ ಪವನ್ ಕುಮಾರ್ ನಾಯಕರಾಗಿ ನಟಿಸಿದ್ದ ಈ ಚಿತ್ರದಲ್ಲಿ ನಾಯಕಿಯರಾಗಿ ವೈಭವಿ ಶಾಂಡಿಲ್ಯ, ಸಂಯುಕ್ತ ಮೆನನ್, ಶರ್ಮಿಳಾ ಮಾಂಡ್ರೆ ಕಾಣಿಸಿಕೊಂಡಿದ್ದಾರೆ. ಇನ್ನು ಈ ಚಿತ್ರದಲ್ಲಿ ಗಣೇಶ್‌ ಅವರ ಪುತ್ರ ವಿಹಾನ್‌ ಸಹ ಒಂದು ಪಾತ್ರದಲ್ಲಿ ನಟಿಸಿದ್ದರು. ಒಂದೊಳ್ಳೆ ಫ್ಯಾಮಿಲಿ ಎಂಟರ್ ಟೈನರ್ ಎನಿಸಿಕೊಂಡಿದ್ದ ಗಾಳಿಪಟ 2 ಸಿನಿಮಾದಲ್ಲಿ ಹಿರಿಯ ನಟ ಅನಂತ್ ನಾಗ್ ಕನ್ನಡ ಮೇಷ್ಟ್ರು ಪಾತ್ರದಲ್ಲಿ ಬಣ್ಣ ಹಚ್ಚಿದ್ದು, ಪದ್ಮಜಾ ರಾವ್‌, ಸುಧಾ ಬೆಳವಾಡಿ, ರಂಗಾಯಣ ರಘು ಸೇರಿದಂತೆ ಮುಂತಾದವರು ನಟಿಸಿದ್ದಾರೆ. ಸಂತೋಷ್‌ ರೈ ಪಾತಾಜೆ ಕ್ಯಾಮೆರಾ ವರ್ಕ್, ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದೆ.  ರಮೇಶ್‌ ರೆಡ್ಡಿ ನಿರ್ಮಾಣದಲ್ಲಿ ಮೂಡಿಬಂದಿದ್ದ ಗಾಳಿಪಟ 2 ಸಿನಿಮಾವನ್ನು ಥಿಯೇಟರ್ ನಲ್ಲಿ ಮಿಸ್ ಮಾಡಿಕೊಂಡವರು ಈಗ ಮನೆಯಲ್ಲಿಯೇ ಕುಳಿತು ನೋಡಬಹುದು.

ಈಗಾಗಲೇ ಜೀ5 ಒಟಿಟಿಯಲ್ಲಿ ಕಿಚ್ಚನ ವಿಕ್ರಾಂತ್ ರೋಣ ಸಿನಿಮಾ ಹಂಗಾಮ ಸೃಷ್ಟಿಸಿದ್ದು, ಟಾಪ್ ಟ್ರೇಡಿಂಗ್ ಮೂರನೇ ಸ್ಥಾನ ಪಡೆದುಕೊಂಡಿದೆ. ಕೋಟಿ ಗಟ್ಟಲೆ ಮಿಲಿಯನ್ ವೀವ್ಸ್ ಪಡೆದಿರುವ ವಿಕ್ರಾಂತ್ ರೋಣ ಚಿತ್ರವನ್ನು ಥಿಯೇಟರ್ ನಲ್ಲಿ‌‌ ಮಿಸ್ ಮಾಡಿದವರು ಮನೆಯಲ್ಲಿ ನೋಡಬಹುದು. ಹಾಗಿದ್ರೆ ಮತ್ಯಾಕೆ ತಡ ಜೀ5ಒಟಿಟಿಗೆ ಲಾಗಿನ್ ಆಗಿ. ಎರಡು ಬಹುನಿರೀಕ್ಷಿತ ಕನ್ನಡ ಸಿನಿಮಾ ನೋಡಿ.

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

ಇದನ್ನೂ ಓದಿ: ‘ನಟಸಾರ್ವಭೌಮ’

ವೈಷ್ಣವ ಜನತೋ..
ಈಶ್ವರ್ ಅಲ್ಲಾ ತೇರಾ ನಾಮ್
ಹಾಡಿ ಮಂತ್ರ ಮುಗ್ಧಗೊಳಿಸಿದ
ಅರೆಬೆತ್ತಲೆ ಫಕೀರ…

ಪೀಪಲ್‌ ಮೀಡಿಯಾ
ಹಂದಲಗೆರೆ ಗಿರೀಶ್

ಕಾವ್ಯ

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

Related Articles

ಇತ್ತೀಚಿನ ಸುದ್ದಿಗಳು

You cannot copy content of this page