ನವದೆಹಲಿ : ಕೇಂದ್ರ ಸರ್ಕಾರ 76ನೇ ಗಣರಾಜ್ಯೊತ್ಸವದ ಸಂದರ್ಭದಲ್ಲಿ ಪದ್ಮ ಪ್ರಶಸ್ತಿಗಳನ್ನು ಘೋಷಿಸಿದೆ. ಹಾಸನ ಜಿಲ್ಲೆಯವರಾದ ಪ್ರಸಾರ ಭಾರತಿ ಮಾಜಿ ಅದ್ಯಕ್ಷ, ಹಿರಿಯ ಪತ್ರಕರ್ತ ಅರಕಲಗೂಡು ಸೂರ್ಯಪ್ರಕಾಶ್ ಹಾಗೂ ಚಲನಚಿತ್ರ ನಿರ್ಮಾಪಕ ಹಾಸನ ರಘು ಪದ್ಮಶ್ರೀ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಕರ್ನಾಟಕದ 9 ಸಾಧಕರಿಗೆ ಪದ್ಮ ಪ್ರಶಸ್ತಿ ಗೌರವ:
ಕಲಾ ವಿಭಾಗದಲ್ಲಿನ ಸಾಧನೆಗಾಗಿ ಶ್ರೀ ಲಕ್ಷ್ಮೀನಾರಾಯಣ ಸುಬ್ರಹ್ಮಣ್ಯಂ ಅವರಿಗೆ ಪದ್ಮವಿಭೂಷಣ, ಸಾಹಿತ್ಯ, ಶಿಕ್ಷಣ, ಪತ್ರಿಕೋದ್ಯಮ ಕ್ಷೇತ್ರದಲ್ಲಿನ ಸಾಧನೆಗಾಗಿ ಶ್ರೀ ಅರಕಲಗೂಡು ಸೂರ್ಯಪ್ರಕಾಶ್ ಮತ್ತು ಕಲಾ ವಿಭಾಗದಲ್ಲಿನ ಸಾಧನೆಗಾಗಿ ಶ್ರೀ ಅನಂತನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ.
ತೊಗಲು ಗೊಂಬೆಯಾಟದ ಹಿರಿಯ ಕಲಾವಿದೆಯಾದ ಶ್ರೀಮತಿ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತ, ಜಾನಪದ ಗಾಯಕರಾದ ಶ್ರೀ ವೆಂಕಪ್ಪ ಅಂಬಾಜಿ ಸುಗಟೇಕರ್, ದೇಶದ ಹೆಸರಾಂತ ಕ್ಯಾನ್ಸರ್ ತಜ್ಞೆ ವೈದ್ಯೆ ಡಾ. ವಿಜಯಲಕ್ಷ್ಮೀ ದೇಶಮಾನೆ, ಚಲನಚಿತ್ರ ನಿರ್ಮಾಪಕರಾದ ಶ್ರೀ ಹಾಸನ ರಘು, ಉದ್ಯಮಿ ಶ್ರೀ ಪ್ರಶಾಂತ್ ಪ್ರಕಾಶ್ ಮತ್ತು ಸಂಗೀತ ನಿರ್ದೇಶಕ ಶ್ರೀ ರಿಕಿ ಕೇಜ್ ಅವರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.