Friday, April 25, 2025

ಸತ್ಯ | ನ್ಯಾಯ |ಧರ್ಮ

ಭಯೋತ್ಪಾದನೆ ಪೋಷಿಸುತ್ತಿರುವುದಾಗಿ ತಪ್ಪೊಪ್ಪಿಕೊಂಡ ಪಾಕಿಸ್ತಾನ; ಅಮೇರಿಕಾ ಪರೋಕ್ಷ ಬೆಂಬಲದ ಬಗ್ಗೆ ಪಾಕ್ ರಕ್ಷಣಾ ಸಚಿವ ಹೇಳಿಕೆ

ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ದಾಳಿಯ ಬಳಿಕ ಈಗ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ನೀಡಿರುವ ಹೇಳಿಕೆ ಈಗ ಜಾಗತಿಕವಾಗಿ ಸಂಚಲನ ಸೃಷ್ಟಿಸುವಂತಿದೆ. ಮಾಧ್ಯಮ ಸಂಸ್ಥೆ ಸ್ಕೈ ನ್ಯೂಸ್ ಗೆ ನೀಡಿದ ಸಂದರ್ಶನದಲ್ಲಿ ಭಯೋತ್ಪಾದನೆಯನ್ನು ಪೋಷಿಸುತ್ತಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ. ಅದೂ ಸಹ ಅಮೇರಿಕಾ ಬೆಂಬಲ ಕೊಟ್ಟ ಹಿನ್ನೆಲೆಯಲ್ಲಿ ಈ ಕೆಲಸ ಮಾಡಿರುವುದಾಗಿ ಹೇಳಿದ್ದಾರೆ.

ತಮ್ಮ ದೇಶವು “ಕಳೆದ ಮೂರು ದಶಕಗಳಿಂದ” ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುತ್ತಿದೆ, ತರಬೇತಿ ನೀಡುತ್ತಿದೆ. ಮತ್ತು ಇದಕ್ಕೆ ಅಮೇರಿಕಾ ಹಣಕಾಸು ಹಾಗೂ ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿದೆ ಎಂದಿದ್ದಾರೆ. ಈ ಮೂಲಕ ಅಮೆರಿಕಾ ‘ಮಗು ಚಿವುಟಿ ತೊಟ್ಟಿಲು ತೂಗುವ’ ಕೆಲಸದ ಬಗ್ಗೆ ಪಾಕಿಸ್ತಾನ ರಕ್ಷಣಾ ಸಚಿವ ಹೇಳಿದ್ದಾರೆ.

ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಬಗ್ಗೆ ಸ್ಕೈ ನ್ಯೂಸ್ ಪತ್ರಕರ್ತೆ ಯಾಲ್ಡಾ ಹಕೀಮ್ ಅವರೊಂದಿಗಿನ ಸಂದರ್ಶನದಲ್ಲಿ ಆಸಿಫ್ ಈ ಹೇಳಿಕೆ ನೀಡಿದ್ದಾರೆ.

ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ, ತರಬೇತಿ, ಮತ್ತು ಹಣಕಾಸಿನ ನೆರವು ನೀಡುವ ದೀರ್ಘ ಇತಿಹಾಸವನ್ನು ಪ್ರಶ್ನಿಸಿದಾಗ ಅವರು ಈ ಹೇಳಿಕೆ ನೀಡಿದ್ದಾರೆ. ‘ನಾವು ಸುಮಾರು 3 ದಶಕಗಳಿಂದ ಅಮೆರಿಕಕ್ಕಾಗಿ ಮತ್ತು ಬ್ರಿಟನ್ ಸೇರಿದಂತೆ ಪಶ್ಚಿಮ ದೇಶಗಳಿಗಾಗಿ ಇಂತ‌ಹ ಕೆಲಸವನ್ನು ಮಾಡುತ್ತಿದ್ದೇವೆ’ ಎಂದು ಅವರು ತಪ್ಪೊಪ್ಪಿಕೊಂಡಿದ್ದಾರೆ.

ಆಸಿಫ್ ಅವರು ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಆರಂಭವಾಗುವ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಎರಡೂ ರಾಷ್ಟ್ರಗಳು ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿರುವುದರಿಂದ, ಇಂತಹ ಸಂಘರ್ಷವು ವಿಶ್ವಕ್ಕೆ ಆತಂಕಕಾರಿಯಾಗಿದೆ ಎಂದು ಅವರು ಹೇಳಿದ್ದಾರೆ. ಆದರೆ, ಈ ವಿವಾದವನ್ನು ಸಂಧಾನದ ಮೂಲಕ ಬಗೆಹರಿಸಬಹುದು ಎಂದು ಆಶಾಭಾವ ವ್ಯಕ್ತಪಡಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page