ಜಮ್ಮು ವಾಯುನೆಲೆ ಮೇಲೆ ಪಾಕಿಸ್ತಾನ ಡ್ರೋನ್ ದಾಳಿ

ಜಮ್ಮುವಿನ ವಾಯುನೆಲೆ ಸೇರಿದಂತೆ ಜಮ್ಮುವಿನ ಅನೇಕ ಸ್ಥಳಗಳನ್ನು ಗುರಿಯಾಗಿಸಿ ಪಾಕಿಸ್ತಾನ ಸೇನೆ ಡ್ರೋನ್ ದಾಳಿ ನಡೆಸಿದ ಬಗ್ಗೆ ವರದಿ ಲಭ್ಯವಾಗಿದೆ. ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನದ ಕಡೆಯಿಂದ ಬಂದ ಮೊದಲ ದಾಳಿ ಇದಾಗಿದ್ದು ಈ ಮೂಲಕ ಭಾರತದ ಮೇಲೆ ಪಾಕಿಸ್ತಾನ ತಾನು ದಾಳಿ ನಡೆಸಲು ಸಶಕ್ತ ಎಂಬ ಸಂದೇಶ ರವಾನಿಸಿದೆ.

ಜಮ್ಮು ವಾಯು ನೆಲೆಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಭಾರತದ ಮೇಲೆ ಡ್ರೋನ್ ದಾಳಿ ನಡೆಸಿದೆ. ಈ ಹಿನ್ನಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಸಂಪೂರ್ಣ ವಿದ್ಯುತ್ ಸ್ಥಗಿತ ಮಾಡಲಾಗಿದೆ. ಅಲ್ಲದೇ ಭಾರತೀಯ ಸೇನೆಯಿಂದ ಪ್ರತಿ ದಾಳಿ ನಡೆಸಲಾಗುತ್ತಿದೆ.

ಜಮ್ಮು, ಆರ್ ಎಸ್ ಪುರ, ಚಾನಿ ಹಿಮತ್ ಮತ್ತು ಇತರ ಹತ್ತಿರದ ಪ್ರದೇಶಗಳಲ್ಲಿನ ಮಿಲಿಟರಿ ಮತ್ತು ನಾಗರಿಕ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಡ್ರೋನ್, ಕ್ಷಿಪಣಿ ದಾಳಿಯನ್ನು ನಡೆಸಿದೆ.

ಆರಂಭಿಕ ವರದಿಗಳ ಪ್ರಕಾರ, ಭಾರತವು ಒಟ್ಟು 8 ಡ್ರೋನ್ ಅಥವಾ ಕ್ಷಿಪಣಿಗಳನ್ನು ಹೊಡೆದುರುಳಿಸಿದೆ.

Related Articles

ಇತ್ತೀಚಿನ ಸುದ್ದಿಗಳು