Monday, June 17, 2024

ಸತ್ಯ | ನ್ಯಾಯ |ಧರ್ಮ

ಪಾಕಿಸ್ತಾನ: ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಮೇಲೆ ಗುಂಡಿನ ದಾಳಿ, ಆಸ್ಪತ್ರೆಗೆ ದಾಖಲು

ಇಸ್ಲಾಮಾಬಾದ್‌: ಪಾಕಿಸ್ತಾನದ ಗುಜ್ರಾನ್‌ವಾಲಾದಲ್ಲಿನ ರ್ಯಾಲಿಯಲ್ಲಿ ಪಾಕಿಸ್ತಾನದ ಮಾಜಿ ಕ್ರಿಕೆಟ್‌ ಆಟಗಾರ ಹಾಗೂ ಪ್ರಧಾನಿ ಇಮ್ರಾನ್‌ ಖಾನ್‌ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಶೆಹಬಾಜ್ ಷರೀಫ್ ಸರ್ಕಾರದ ವಿರುದ್ಧ ಇಸ್ಲಾಮಾಬಾದ್‌ನಲ್ಲಿ ನಡೆಯುತ್ತಿರುವ “ಲಾಂಗ್ ಮಾರ್ಚ್”ಅನ್ನು ಉದ್ದೇಶಿಸಿ ಟ್ರಕ್‌ ಮೇಲೆ ನಿಂತು ಮಾತನಾಡುತ್ತಿರುವ ಸಂದರ್ಭದಲ್ಲಿ ಇಮ್ರಾನ್‌ ಖಾನ್‌ ಅವರ ಮೇಲೆ ದಾಳಿಕೋರನೊಬ್ಬ ಗುಂಡು ಹಾರಿಸಿದ್ದಾನೆ. ದಾಳಿಯಲ್ಲಿ ಗುಂಡು ಇಮ್ರಾನ್‌ ಖಾನ್‌ ಅವರ ಕಾಲಿಗೆ ತಗುಲಿದ್ದು, ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಎನ್‌ಡಿಟಿವಿ ವರದಿಯಿಂದ ತಿಳಿದುಬಂದಿದೆ.

ಈ ಘಟನೆಯು 2007 ರಲ್ಲಿ ನಡೆದ ಘಟನೆಯನ್ನು ಮರುಕಳಿಸುವಂತೆ ಮಾಡಿದ್ದು, ಆ ಸಂದರ್ಭದಲ್ಲಿದ್ದ ಮಾಜಿ ಪ್ರಧಾನಿ ಬೆನಜೀರ್ ಭುಟ್ಟೊ ಅವರನ್ನು ಕೂಡ ಇಂತಹದ್ದೇ ರ್ಯಾಲಿಯಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು. ಆದರೆ ಇಮ್ರಾನ್‌ ಖಾನ್‌ ಅವರು ಸಾವಿನ ದವಡೆಯಿಂದ ಪಾರಾಗಿರುವುದು ಅವರ ಅದೃಷ್ಟವೇ ಸರಿ.

ಈ ಕುರಿತು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ)ಪಕ್ಷ ವಿಡಿಯೋ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Related Articles

ಇತ್ತೀಚಿನ ಸುದ್ದಿಗಳು