ಪಾಕಿಸ್ತಾನದಲ್ಲಿನ ಬಲೂಚಿಸ್ಥಾನ ಪ್ರಾಂತ್ಯ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಮುಹಮ್ಮದ್ ನೂರ್ ಮೆಸ್ಕಂಜೈ ಅವರನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.
ಮಾಹಿತಿ ಪ್ರಕಾರ, ಖರಾನ್ ಪ್ರದೇಶದ ಮಸೀದಿಯ ಹೊರಭಾಗದಲ್ಲಿ ಗುಂಡಿನ ದಾಳಿ ನಡೆದಿದ್ದು, ಆಸ್ಪತ್ರೆಗೆ ಕರೆದೊಯ್ಯುತ್ತಿರುವ ಸಂರ್ಭದಲ್ಲಿ ಮಾರ್ಗದ ಮಧ್ಯೆ ನ್ಯಾಯಮೂರ್ತಿಗಳು ಕೊನೆಯುಸಿರೆಳೆದಿದ್ದಾರೆ ಎಂದು ವರದಿ ತಿಳಿಸಿದೆ.
ಪಾಕಿಸ್ತಾನದಲ್ಲಿ ಆಂತರಿಕ ಭದ್ರತಾ ವ್ಯವಸ್ಥೆ ಕುಸಿದಿದೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬರುತ್ತಿರುವ ಬೆನ್ನಲ್ಲೇ ಮಾಜಿ ಮುಖ್ಯ ನ್ಯಾಯಮೂರ್ತಿಗಳ ಕೊಲೆಯಾಗಿದೆ ಎಂದು ತಿಳಿದುಬಂದಿದೆ.
ಮಾಜಿ ಮುಖ್ಯ ನ್ಯಾಯಮೂರ್ತಿ ಹತ್ಯೆಗೆ ಬಲೂಚಿಸ್ತಾನ ಮುಖ್ಯ ನ್ಯಾಯಮೂರ್ತಿ ಮೀರ್ ಅಬ್ದುಲ್ ಖುದೂಸ್ ಬಿಂಜೆಂಜೋ ಸೇರಿದಂತೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ. ಅಲ್ಲದೇ, ದಾಳಿಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.