Tuesday, September 2, 2025

ಸತ್ಯ | ನ್ಯಾಯ |ಧರ್ಮ

ಗ್ರಾಮ ಪಂಚಾಯಿತಿ ಚುನಾವಣೆ: ಚುನಾವಣಾ ಆಯೋಗದಿಂದ ಸ್ಪಷ್ಟನೆ

ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ವೇಳಾಪಟ್ಟಿ ಪ್ರಕಟಗೊಂಡಿರುವ ಬಗ್ಗೆ ಸುಳ್ಳು ಮಾಹಿತಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. ಆ ಮೂಲಕ ಗ್ರಾಮ ಪಂಚಾಯಿತಿ ಚುನಾವಣೆಗೆ ಯಾವುದೇ ವೇಳಾಪಟ್ಟಿಯನ್ನು ಪ್ರಕಟಿಸಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಹೇಳಿದೆ.

ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ. ಚುನಾವಣಾ ವೇಳಾಪಟ್ಟಿ ಪ್ರಕಟಗೊಂಡಿರುವ ಬಗ್ಗೆ ಸುಳ್ಳು ಮಾಹಿತಿಯು ಹರಿದಾಡುತ್ತಿದೆ. ಹೀಗಾಗಿ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ರಾಜ್ಯ ಚುನಾವಣಾ ಆಯೋಗ ಯಾವುದೇ ವೇಳಾಪಟ್ಟಿ ಪ್ರಕಟಿಸಿರುವುದಿಲ್ಲ. ಆಯೋಗ ಸುದ್ದಿಗೋಷ್ಠಿ ಕರೆದು ಚುನಾವಣೆಯ ವೇಳಾಪಟ್ಟಿ ಪ್ರಕಟಿಸುತ್ತದೆ. ಪ್ರಸ್ತುತ ಹರಿದಾಡುತ್ತಿರುವ ಚುನಾವಣಾ ವೇಳಾಪಟ್ಟಿ ಸುಳ್ಳು ಮಾಹಿತಿಯಾಗಿದೆ. ಸಾರ್ವಜನಿಕರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ರಾಜ್ಯ ಚುನಾವಣಾ ಆಯೋಗದಿಂದ ಮಾಧ್ಯಮ ಪ್ರಕಟಣೆ ನೀಡಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page