ಕರ್ನಾಟಕದ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ರಾಜ್ಯದ ನೂತನ ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದ್ದಾರೆ. ಇದರ ಜೊತೆ ಎಂಟು ಸಚಿವರು ಕೂಡ ಪ್ರಮಾಣ ವರಚನ ಸ್ವೀಕರಿಸಿದ್ದಾರೆ.
ಕೊರಟಗೆರೆ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿರುವ ಜಿ ಪರಮೇಶ್ವರ್ ಅವರು ಇಂದು ಸಂವಿಧಾನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ 6ನೇ ಬಾರಿಗೆ ಸಚಿವರಾಗಿರುವ ಸಿದ್ದರಾಮಯ್ಯ ಸಂಪುಟ ಸೇರಿದ್ದಾರೆ.
ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೆಲ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಪುದುಚೆರಿ ಮುಖ್ಯಮಂತ್ರಿ ಎನ್. ರಂಗಸ್ವಾಮಿ ಸೇರಿದಂತೆ ಹಲವು ಭಾಗವಹಿಸಿದ್ದಾರೆ.