Tuesday, July 29, 2025

ಸತ್ಯ | ನ್ಯಾಯ |ಧರ್ಮ

ಕಾರ್ಕಳ| ಪರಶುರಾಮನ ನಕಲಿ ಪ್ರತಿಮೆ ಪ್ರಕರಣ: ಶಿಲ್ಪಿ ಕೃಷ್ಣ ನಾಯ್ಕ ಬಂಧನ

ಕಾರ್ಕಳ: ಉಡುಪಿ ಜಿಲ್ಲೆಯ ಬೈಲೂರಿನಲ್ಲಿ ಥೀಮ್‌ ಪಾರ್ಕಿನಲ್ಲಿ ಸ್ಥಾಪಿಸಲಾಗಿದ್ದ ವಿವಾದಸ್ಪದ ನಕಲಿ ಪರಶುರಾಮನ ಮೂರ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮೂರ್ತಿಯ ಶಿಲ್ಪಿ ಪೊಲೀಸರು ಶಿಲ್ಪಿ ಕೃಷ್ಣ ನಾಯ್ಕ ಅವರನ್ನು ಕೇರಳದಲ್ಲಿ ವಶಕ್ಕೆ ಪಡೆದಿದ್ದಾರೆ.

Parashurama Theme Park | ಕೃಷ್ಣ ನಾಯ್ಕ ಅವರ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಬಂಧಿಸಿ ವಶಕ್ಕೆ ಪಡೆದಿದ್ದಾರೆ.

ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ (ನ.07) ಜಾಮೀನು ತಿರಸ್ಕರಿಸಿ ಆದೇಶ ನೀಡಿತ್ತು. ಅನಂತರ ಪೊಲೀಸರು ಪತ್ತೆ ಕಾರ್ಯ ತೀವ್ರಗೊಳಿಸಿ ಹುಡುಕಾಟ ನಡೆಸಿದ್ದರು. ಕೇರಳದ ಕ್ಯಾಲಿಕಟ್ ಬಳಿ ತಲೆಮರಸಿಕೊಂಡಿದ್ದ ಕೃಷ್ಣ ನಾಯ್ಕ್ ಅವರನ್ನು ಪೊಲೀಸರು ಪತ್ತೆ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೃಷ್ಣ ನಾಯ್ಕ್ ‘ಕೃಷ್ಣ ಆರ್ಟ್ ವರ್ಲ್ಡ್’ ಎಂಬ ಸಂಸ್ಥೆಯ ಮೂಲಕ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ ಮೂರ್ತಿಯನ್ನು ಸ್ಥಾಪಿಸುವ ಗುತ್ತಿಗೆಯನ್ನು ಕೃಷ್ಣ ನಾಯ್ಕ್‌ ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಉಡುಪಿ ನಿರ್ಮಿತಿ ಕೇಂದ್ರದಿಂದ 1.25 ಕೋಟಿ ರೂ. ಹಣ ಪಡೆದುಕೊಂಡು ಕಾಮಗಾರಿ ನಡೆಸಿದ್ದು, ಅನಂತರ ಆರೋಪಿ ಕಂಚಿನ ಮೂರ್ತಿಯನ್ನು ಮಾಡದೆ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿರುವುದಾಗಿ ಆರೋಪಿಸಿ ನಲ್ಲೂರಿನ ಕೃಷ್ಣ ಶೆಟ್ಟಿ ದೂರು ಸಲ್ಲಿಸಿದ್ದರು.

ಅವರು ಜೂನ್ ತಿಂಗಳಲ್ಲಿ ನೀಡಿದ ದೂರನ್ನು ಆಧರಿಸಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page