Sunday, October 12, 2025

ಸತ್ಯ | ನ್ಯಾಯ |ಧರ್ಮ

Ban RSS : ಸರ್ಕಾರಿ ಜಾಗಗಳಲ್ಲಿ ಸಂಘಪರಿವಾರದ ಶಾಖೆಗೆ ಸಧ್ಯದಲ್ಲೇ ನಿಷೇಧ; ವೈರಲ್ ಆದ ಪ್ರಿಯಾಂಕ್ ಖರ್ಗೆ ಪತ್ರ

Ban RSS : ಸರ್ಕಾರಿ ಜಾಗಗಳಲ್ಲಿ ಸಂಘಪರಿವಾರದ ಶಾಖೆಗೆ ಸಧ್ಯದಲ್ಲೇ ನಿಷೇಧ; ವೈರಲ್ ಆದ ಪ್ರಿಯಾಂಕ್ ಖರ್ಗೆ ಪತ್ರ

ರಾಜ್ಯದ ಸರ್ಕಾರಿ ಜಾಗಗಳಲ್ಲಿ ಅನುಮತಿ ಇಲ್ಲದೇ ಅನಾದಿಕಾಲದಿಂದ RSS ಸಂಘಟನೆ ನಡೆಸಿಕೊಂಡು ಬಂದ ಬೈಠಕ್‌ಗಳಿಗೆ ಸಧ್ಯದಲ್ಲೇ ಬ್ರೇಕ್ ಬೀಳುವ ಸಾಧ್ಯತೆ ಇದೆ. ಈ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದಿದ್ದು, ಮುಖ್ಯಮಂತ್ರಿಗಳು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ಧರಾಮಯ್ಯಗೆ ಬರೆದಿರುವಂತ ಪತ್ರದಲ್ಲಿ ಜನ ಸಮುದಾಯದಲ್ಲಿ ದ್ವೇಷ ಬಿತ್ತುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸುವುಕ್ಕಾಗಿ ಹಾಗೂ ದೇಶದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯುವುದಕ್ಕಾಗಿ ಸಮಗ್ರತೆ, ಸಮಾನತೆ ಮತ್ತು ಏಕತೆಯ ಮೂಲಭೂತ ತತ್ತ್ವಗಳನ್ನೊಳಗೊಂಡ ಸಂವಿಧಾನವು ನಮಗೆ ಅಧಿಕಾರವನ್ನು ನೀಡಿರುತ್ತದೆ ಎಂದಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘ ಎಂಬ ಹೆಸರಿನ ಸಂಘಟನೆಯು ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಸಾರ್ವಜನಿಕ ಸರ್ಕಾರಿ ಮೈದಾನಗಳನ್ನು ಬಳಸಿಕೊಂಡು ಶಾಖೆಗಳನ್ನು ನಡೆಸುತ್ತಾ, ಘೋಷಣೆಗಳನ್ನು ಕೂಗುತ್ತಾ ಮಕ್ಕಳು ಮತ್ತು ಯುವ ಸಮುದಾಯದ ಮನಸಿನಲ್ಲಿ ಭಾರತದ ಏಕತೆಯ ವಿರುದ್ಧವಾಗಿ, ಹಾಗೂ ಸಂವಿಧಾನದ ಆಶಯಗಳ ವಿರುದ್ಧವಾಗಿ ನಕಾರಾತ್ಮಕ ಆಲೋಚನೆಗಳನ್ನು ತುಂಬಲಾಗುತ್ತಿದೆ ಎಂದು ಹೇಳಿದ್ದಾರೆ.
ಪೊಲೀಸ್ ಅನುಮತಿ ಪಡೆಯದೆ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪುದರ್ಶನ ನಡೆಸುವ ಮೂಲಕ ಮುಗ್ಧ ಮಕ್ಕಳು ಹಾಗೂ ಯುವಜನರ ಮನಸಿನ ಮೇಲೆ ದುಷ್ಪರಿಣಾಮ ಬೀರಲಾಗುತ್ತಿದೆ ಎಂದಿದ್ದಾರೆ.

ನಾಡಿನ ಮಕ್ಕಳು, ಯುವ ಸಮುದಾಯ, ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಪತ್ರದಲ್ಲಿ ಸಿಎಂ ಸಿದ್ಧರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.

ಸಧ್ಯ ಈ ಒಂದು ಮನವಿಯನ್ನು ಪುರಸ್ಕರಿಸಿ, ರಾಜ್ಯದಲ್ಲಿನ ಎಲ್ಲಾ ಸರ್ಕಾರಿ ಜಾಗಗಳಲ್ಲಿ RSS ನಡೆಸುವ ಬೈಠಕ್ ಗಳಿಗೆ ನಿಷೇಧ ಹೇರಬೇಕು ಎಂದು ಮನವಿ ಮಾಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page