ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ
- ನವೋದ್ಯಮಿಗಳಿಗೆ ಅತ್ಯಾಧುನಿಕ ಸೌಲಭ್ಯವುಳ್ಳ ವಿಶ್ವದರ್ಜೆಯ ಪರಿಪೋಷಣ ಕೇಂದ್ರ ʻINNOVERSEʼ ಅನ್ನು 50 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ.ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.
- ಸ್ಟಾರ್ಟಪ್ ನೀತಿಯಡಿಯಲ್ಲಿ ಅನುದಾನ ನೀಡಿರುವ ಸ್ಟಾರ್ಟ್ಅಪ್ಗಳ ಪರಿಹಾರಗಳ ಅಳವಡಿಕೆಯನ್ನು ವೇಗಗೊಳಿಸಲು ʻPropelʼ ಎಂಬ ಯೋಜನೆಯನ್ನು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಆಯೋಜಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಒಂದು ಕೋಟಿ ರೂ. ಅನುದಾನವನ್ನು ನಿಗದಿಪಡಿಸಲಾಗಿದೆ.
- ಸ್ಟಾರ್ಟ್ಅಪ್ಗಳಿಗೆ Global Innovation Alliance- Market Access Programme (GIA-MAP) ಕಾರ್ಯಕ್ರಮವನ್ನು ಮೂರು ಕೋಟಿ ರೂ.ಗಳ ವೆಚ್ಚದಲ್ಲಿ ಆಯೋಜಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಒಂದು ಕೋಟಿ ರೂ. ಅನುದಾನವನ್ನು ನಿಗದಿಪಡಿಸಲಾಗಿದೆ.
- New Age Incubation Network (NAIN) ಕೇಂದ್ರಗಳನ್ನು ಬೆಂಬಲಿಸಲು ತಂತ್ರಜ್ಞಾನ ವರ್ಗಾವಣೆ ಸಂಸ್ಥೆಯನ್ನು (Technology Transfer Organisation) ನಾಲ್ಕು ಕೋಟಿ ರೂ. ಗಳ ಯೋಜನಾ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಎರಡು ಕೋಟಿ ರೂ. ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.
- ಹೆಲ್ತ್-ಟೆಕ್ ಮತ್ತು ಮೆಡ್-ಟೆಕ್ನಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ (Centre of Excellence in Health Tech & Med Tech) ಕೇಂದ್ರವನ್ನು 50 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ.ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.
- ಜೈವಿಕ-ಬ್ಯಾಂಕ್ (Bio Bank) ಅನ್ನು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಎರಡು ಕೋಟಿ ರೂ.ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.
- ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ʻCentre of Excellence in Wireless & Wired Technologies in Karnataka (COEWWT)ʼ ಅನ್ನು 25 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಐದು ಕೋಟಿ ರೂ.ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.
- ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ಡಿಸೈನ್ (Centre of Excellence in Design) ಕೇಂದ್ರವನ್ನು 20 ಕೋಟಿ ರೂ.ಗಳ ಯೋಜನಾ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಎಂಟು ಕೋಟಿ ರೂ. ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.
- ಕರ್ನಾಟಕ ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆ ನೀತಿಯ ಅನುಷ್ಠಾನಕ್ಕೆ ದೃಢವಾದ ಮತ್ತು ಪಾರದರ್ಶಕ ಆಡಳಿತದ ಚೌಕಟ್ಟನ್ನು ರಚಿಸುವುದು ಹಾಗೂ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಾಡುವುದು ಅಗತ್ಯವಾಗಿದೆ. ಈ ಉದ್ದೇಶಕ್ಕಾಗಿ ಕರ್ನಾಟಕ ರಾಜ್ಯ ಸಂಶೋಧನಾ ಪ್ರತಿಷ್ಠಾನವನ್ನು (ಕೆಎಸ್ಆರ್ಎಫ್) ರಚಿಸಲಾಗುವುದು.
- ರಾಜ್ಯದ ವಿಜ್ಞಾನ ಕೇಂದ್ರಗಳ ಮೂಲಸೌಲಭ್ಯಗಳನ್ನು ಬಲಪಡಿಸಲು, ಎರಡು ಪ್ರಾದೇಶಿಕ ವಿಜ್ಞಾನ ಕೇಂದ್ರಗಳನ್ನು
ತಲಾ 50 ಲಕ್ಷ ರೂ. ವೆಚ್ಚದಲ್ಲಿ ಮತ್ತು ನಾಲ್ಕು ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರಗಳನ್ನು ತಲಾ 30 ಲಕ್ಷ ರೂ. ವೆಚ್ಚದಲ್ಲಿ ಉನ್ನತೀಕರಿಸಲಾಗುವುದು. ಈ ಯೋಜನೆಗೆ ಪ್ರಸ್ತುತ ವರ್ಷದಲ್ಲಿ ಎರಡು ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು. - ಸಂಶೋಧನೆ ಮತ್ತು ನಾವೀನ್ಯತೆ ವ್ಯವಸ್ಥೆಯು ಉದ್ಯಮಗಳು, ವಿಶ್ವವಿದ್ಯಾನಿಲಯಗಳು, ಸಂಶೋಧನಾ ಸಂಸ್ಥೆಗಳು ಮತ್ತು ಸರ್ಕಾರಗಳು ಸೇರಿದಂತೆ ಇವರ ನಡುವಿನ ಸಂಬಂಧಗಳ ಸಂಕೀರ್ಣ ವ್ಯವಸ್ಥೆಯಾಗಿದೆ. ಈ ಎಲ್ಲಾ ಭಾಗೀದಾರರನ್ನು ಒಟ್ಟುಗೂಡಿಸಲು ಮತ್ತು ಅವರ ನಡುವೆ ಸಮನ್ವಯತೆಯನ್ನು ಸಾಧಿಸಲು ಇ-ಪ್ಲಾಟ್ಫಾರ್ಮ್ e-KRDIP ಅನ್ನು ರಚಿಸಲಾಗುವುದು.
- ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಲು ರೈತರು, ಕುಶಲಕರ್ಮಿಗಳು, ಕಾರ್ಮಿಕರು, ಯಂತ್ರಕಾರರು ಮತ್ತು ಸಾಮಾನ್ಯ ಜನರು ರಚಿಸಿದ ತಳಹಂತದ ನಾವೀನ್ಯತೆಗಳನ್ನು ಗುರುತಿಸಿ, ವ್ಯಾಖ್ಯಾನಿಸಲು ಮತ್ತು ಅವುಗಳಿಗೆ ಮೌಲ್ಯವನ್ನು ದೊರಕಿಸುವ ಮೂಲಕ ವಾಣಿಜ್ಯೀಕರಣಕ್ಕೆ ಬೆಂಬಲವನ್ನು ನೀಡುವ ಯೋಜನೆಗೆ ಐದು ಕೋಟಿ ರೂ. ಒದಗಿಸಲಾಗುವುದು.