Home ದೇಶ ಪತಂಜಲಿಗೆ ಸೇರಿದ ಫಾರ್ಮಸಿ ಉತ್ಪನ್ನಗಳ ಉತ್ಪಾದನಾ ಪರವಾನಗಿ ರದ್ದು

ಪತಂಜಲಿಗೆ ಸೇರಿದ ಫಾರ್ಮಸಿ ಉತ್ಪನ್ನಗಳ ಉತ್ಪಾದನಾ ಪರವಾನಗಿ ರದ್ದು

0

ಡೆಹ್ರಾಡೂನ್: ಪತಂಜಲಿಯ 10 ದಿವ್ಯ ಫಾರ್ಮಸಿ ಉತ್ಪನ್ನಗಳ ಉತ್ಪಾದನಾ ಪರವಾನಗಿಯನ್ನು ರದ್ದುಗೊಳಿಸಲಾಗಿದೆ. ಉತ್ತರಾಖಂಡ್ ಔಷಧ ಪರವಾನಗಿ ಪ್ರಾಧಿಕಾರ ಈ ಕುರಿತು ಆದೇಶ ಹೊರಡಿಸಿದೆ.

ಜನರನ್ನು ದಾರಿ ತಪ್ಪಿಸುವ ರೀತಿಯಲ್ಲಿ ವಾಣಿಜ್ಯ ಜಾಹೀರಾತುಗಳನ್ನು ನೀಡಲಾಗಿದೆ ಎಂಬ ಕಾರಣಕ್ಕಾಗಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ವಾಣಿಜ್ಯ ಜಾಹೀರಾತಿನ ವಿಷಯದಲ್ಲಿ ಪತಂಜಲಿಯು ‘ಡ್ರಗ್ಸ್ ಅಂಡ್ ಮ್ಯಾಜಿಕ್ ರೆಮಿಡೀಸ್ ಆಕ್ಟ್’ ಮತ್ತು ‘ಡ್ರಗ್ಸ್ ಅಂಡ್ ಕಾಸ್ಮೆಟಿಕ್ ಆಕ್ಟ್’ ಅನ್ನು ಉಲ್ಲಂಘಿಸಿದೆ ಎಂದು ಪ್ರಾಧಿಕಾರ ದೃಢಪಡಿಸಿದೆ. ಉತ್ಪನ್ನಗಳ ಜಾಹೀರಾತು ಪ್ರಯೋಜನಗಳ ಬಗ್ಗೆ ಪುರಾವೆಗಳನ್ನು ಒದಗಿಸಲು ವಿಫಲವಾಗಿದೆ ಎಂದು ಅದು ಹೇಳಿದೆ. ತಮ್ಮ ವಾದಕ್ಕೆ ಪೂರಕವಾಗಿ ನೀಡಿರುವ ಉತ್ತರ ತೃಪ್ತಿಕರವಾಗಿಲ್ಲ ಎಂದೂ ಸ್ಪಷ್ಟಪಡಿಸಿದೆ.

ಆಧುನಿಕ ಚಿಕಿತ್ಸಾ ವಿಧಾನಗಳ ಬಗ್ಗೆ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಪತಂಜಲಿ ಸಂಸ್ಥೆಯ ವಿರುದ್ಧ ಭಾರತೀಯ ವೈದ್ಯಕೀಯ ಸಂಘ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿರುವುದು ಗೊತ್ತೇ ಇದೆ. ಸುಳ್ಳು ಮತ್ತು ದಾರಿತಪ್ಪಿಸುವ ಹೇಳಿಕೆಗಳನ್ನು ನೀಡದಂತೆ ವಿಚಾರಣಾ ನ್ಯಾಯಾಲಯ ಎಚ್ಚರಿಕೆ ನೀಡಿದೆ. ಕಂಪನಿ ಪರ ವಕೀಲರು ಮುಂದೆ ಆ ರೀತಿ ಆಗುವುದಿಲ್ಲ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದ್ದರು. ಆದರೆ, ಅವರ ಉಲ್ಲಂಘನೆಗೆ ನ್ಯಾಯಾಲಯ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸಾರ್ವಜನಿಕ ಕ್ಷಮೆಯಾಚನೆಗೆ ಆದೇಶಿಸಲಾಗಿದೆ. ಸದ್ಯ ಈ ವಿಷಯ ಸುಪ್ರೀಂ ಕೋರ್ಟ್‌ನಲ್ಲಿದೆ.

Exit mobile version