ನವದೆಹಲಿ: ಭಯೋತ್ಪಾದಕ ಸಂಘಟನೆಗೆ ನಿಧಿ ಸಂಗ್ರಹಿಸುವ ಮತ್ತು ಕ್ರಿಪ್ಟೋಕರೆನ್ಸಿಯನ್ನು ಬೇರೆ ಪ್ರದೇಶಗಳಿಗೆ ರವಾನಿಸುವ ಆರೋಪ ಹೊತ್ತಿರುವ ಮೊಹ್ಸಿನ್ ಅಹ್ಮದ್ ನನ್ನು ಪಟಿಯಾಲ ಹೌಸ್ ಕೋರ್ಟ್ ಗೆ ಕರೆತರಲಾಗಿದೆ ಎಂದು ಎಎನ್‌ಐ ವರದಿ ತಿಳಿಸಿದೆ.
ಭಾರತ ಮತ್ತು ವಿದೇಶಗಳಲ್ಲಿ ಸಹಾನುಭೂತಿ ಹೊಂದಿರುವವರಿಂದ ಭಯೋತ್ಪಾದಕ ಸಂಘಟನೆ ಐಸಿಸ್‌ಗೆ, ನಿಧಿ ಸಂಗ್ರಹಣೆ ಮತ್ತು ಕ್ರಿಪ್ಟೋಕರೆನ್ಸಿ ರೂಪದಲ್ಲಿ ಸಿರಿಯಾ, ಇತರ ಸ್ಥಳಗಳಿಗೆ ಕಳುಹಿಸಿದ ಆರೋಪದ ಮೇಲೆ ಜೂನ್ 25 ರಂದು ಎನ್ಐಎ ಅವರನ್ನು ಬಂಧಿಸಿತ್ತು. ವಿಚಾರಣೆಯ ನಂತರ ಮೊಹ್ಸಿನ್ ಅಹ್ಮದ್ ನನ್ನು ಪಟಿಯಾಲ ಹೌಸ್ ಕೋರ್ಟ್‌ಗೆ ಕರೆತರಲಾಗಿದೆ ಎಂದು ತಿಳಿಸಿದೆ.