Home ಬೆಂಗಳೂರು ʼಪೇ ಸಿಎಂʼ ಜೊತೆ ʼಸೇ ಸಿಎಂʼ ಅಭಿಯಾನ: ಬಿಜೆಪಿಗೆ ಎಚ್ಚರಿಕೆ ನೀಡಿದ ಕಾಂಗ್ರೆಸ್‌

ʼಪೇ ಸಿಎಂʼ ಜೊತೆ ʼಸೇ ಸಿಎಂʼ ಅಭಿಯಾನ: ಬಿಜೆಪಿಗೆ ಎಚ್ಚರಿಕೆ ನೀಡಿದ ಕಾಂಗ್ರೆಸ್‌

0

ಬೆಂಗಳೂರು: ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳ ಕುರಿತು ಕೇಳಲಾದ 50 ಪ್ರಶ್ನೆಗಳಿಗೆ ಇನ್ನೂ ಒಂದು ಉತ್ತರ ನೀಡಿದ ಕಾರಣ ರಾಜ್ಯ ಕಾಂಗ್ರೆಸ್‌ ಪಕ್ಷವು ಉತ್ತರ ನೀಡದೇ ಹೋದರೆ ʼಪೇ ಸಿಎಂʼ ಜೊತೆ ʼಸೇ ಸಿಎಂʼ ಅಭಿಯಾನ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌ ಘಟಕವು, ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ 550 ಭರವಸೆಗಳನ್ನು ನೀಡಿತ್ತು, ಇದುವರೆಗೂ ನಾವು ಬಿಜೆಪಿ ನೀಡಿದ ಭರವಸೆಗಳ ಬಗ್ಗೆ 50 ಪ್ರಶ್ನೆಗಳನ್ನು ಕೇಳಿದ್ದೇವೆ, ಆದರೆ ಬಿಜೆಪಿ ನೀಡಿದ ಉತ್ತರ – ಶೂನ್ಯ ಎಂದು ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದ್ದು, ತಮ್ಮದೇ ಪ್ರಣಾಳಿಕೆಯಲ್ಲಿನ ಅಂಶಗಳ ಬಗ್ಗೆ ಬಿಜೆಪಿಗೆ ಮಾತನಾಡುವ ಧೈರ್ಯವಿರದಿರುವುದು ಸರ್ಕಾರದ ವಿಫಲತೆಗೆ ನಿದರ್ಶನ ಎಂದು ಟೀಕಿಸಿದೆ.

ಬಿಜೆಪಿಗೆ ತಮ್ಮದೇ ಪ್ರಣಾಳಿಕೆಯನ್ನು ಇಟ್ಟುಕೊಂಡು ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸುವ ದಮ್ಮು ತಾಕತ್ತು ಇದೆಯೇ? ರಾಜ್ಯದ ಜನತೆಗೆ ಎಷ್ಟು ಭರವಸೆಗಳನ್ನು ಈಡೇರಿಸಿದ್ದೇವೆ, ಈಡೇರಿಸಿಲ್ಲ ಎಂಬ ಲೆಕ್ಕ ಕೊಡಲು ಸಾಧ್ಯವೇ? ಅಥವಾ ಪ್ರಣಾಳಿಕೆ ಮುಂದಿಟ್ಟುಕೊಂಡ ದಮ್ಮು ತಾಕತ್ತಿನ ಪ್ರದರ್ಶನ ಮಾಡಲು ಸಾಧ್ಯವೇ? ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ʼಪೇ ಸಿಎಂʼ ಈಗ ʼಸೇ ಸಿಎಂʼ ಆಗಲಿ, ರಾಜ್ಯದ ಜನತೆಗೆ ಉತ್ತರ ನೀಡಲಿ. ಚುನಾವಣೆಗೂ ಮೊದಲು ನೀಡಿದ ಭರವಸೆಗಳನ್ನು ಮರೆತು ವಚನಭ್ರಷ್ಟರಾದ ಬಿಜೆಪಿ ಸರ್ಕಾರ ರಾಜ್ಯದ ಜನತೆಗೆ ಉತ್ತರ ನೀಡಬೇಕಿದ್ದು, ತಮ್ಮದೇ ಪಕ್ಷದ ಪ್ರಣಾಳಿಕೆಯ ಭರವಸೆಗಳ ಬಗ್ಗೆ ಮಾತಾಡಲು ಕೂಡ 40% ಕಮಿಷನ್ ನೀಡಬೇಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ? ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅವರು, ನಿಮ್ಮ ಬಳಿ ಉತ್ತರವಿದೆಯೇ? ಎಂಬ ಅಭಿಯಾನಕ್ಕೆ ಕಾಂಗ್ರೆಸ್ ಪಕ್ಷ ಚಾಲನೆ ನೀಡಿ, ಆ ಮೂಲಕ ಬಿಜೆಪಿ ಸರ್ಕಾರಕ್ಕೆ 50 ಪ್ರಶ್ನೆಗಳನ್ನು ಕೇಳಲಾಗಿದೆ. ಆದರೆ ಈವರೆಗೂ ಅವರು ಒಂದು ಪ್ರಶ್ನೆಗೂ ಉತ್ತರಿಸಿಲ್ಲ. ಜನರ ಪರವಾಗಿ ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸದಿದ್ದರೆ PayCM ಜೊತೆಗೆ SayCM ಅಭಿಯಾನ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್‌ ಬಾಬು ಮಾತನಾಡಿ, ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ನೀಡಿದ ಪ್ರಣಾಳಿಕೆಯ ಭರವಸೆ ಕುರಿತು ಕೇಳಲಾದ ಪ್ರಶ್ನೆಗೆ ಬಿಜೆಪಿ ಇನ್ನೂ ಉತ್ತರಿಸಿಲ್ಲ. ಬಿಜೆಪಿ ಸರ್ಕಾರ ಮಂಡಿಸಿದ 3 ಬಜೆಟ್‌ಗಳಲ್ಲಿ ಸಾಲದ ಹೊರೆಯೇ ಹೆಚ್ಚಾಗಿದೆ. ಹೀಗಾಗಿ ಅವರು ಪ್ರಣಾಳಿಕೆಯಲ್ಲಿ ಕೊಟ್ಟಿದ್ದ 600 ಭರವಸೆಗಳಲ್ಲಿ ಕೇವಲ 10% ಈಡೇರಿಸಲೂ ಸಾಧ್ಯವಾಗಿಲ್ಲ ಎಂದರು.

You cannot copy content of this page

Exit mobile version