ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ paycm ಅಭಿಯಾನವು ಚಾಲ್ತಿಯಲ್ಲಿದ್ದು ಅದರ ಕುರಿತು ಪೋಸ್ಟರ್ ಅಂಟಿಸಿದವರ ವಿರುದ್ದ ಸರ್ಕಾರ ಕೇಸು ದಾಖಲಿಸಲು ಮುಂದಾಗಿದೆ.
40% ಕಮಿಷನ್‌ಗೆ ಕಿರುಕುಳ ನೀಡಿ ಒಂದು ಜೀವ ಬಲಿ ಪಡೆದ ಆರೋಪಿಯಾಗಿದ್ದ ಈಶ್ವರಪ್ಪರನ್ನು ಒಂದು ದಿನವೂ ಬಂಧಿಸಿ ವಿಚಾರಣೆ ನಡೆಸಲಿಲ್ಲ. ಆದರೆ #PayCM ಪೋಸ್ಟರ್ ಅಂಟಿಸಿದವರ ವಿರುದ್ಧ 7,8 ಕೇಸ್‌ಗಳು, ಬಂಧನಕ್ಕೆ ವಿಶೇಷ ಪೊಲೀಸ್ ತಂಡ ರಚನೆ ಮಾಡಿ ಕಾಂಗ್ರೆಸ್ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಕಾಂಗ್ರೇಸ್ ಆರೋಪಿಸಿದೆ.
ಈ ಕುರಿತು ಟ್ವೀಟ್ ಮಾಡುವುದರ ಮೂಲಕ @BSBommai ಅವರೇ, ಇದು ಹೇಡಿತನದ, ಲಜ್ಜೆಗೇಡಿತನದ ಪರಮಾವಧಿಯಲ್ಲವೇ? ಎಂದು ಕರ್ನಾಟಕ ಕಾಂಗ್ರೇಸ್ ಪ್ರಶ್ನೆ ಮಾಡಿದೆ.
ಇದನ್ನೂ ನೋಡಿ: https://www.youtube.com/watch?v=WTjs8dHAXO0