ನಮ್ಮ ಸಂವಿಧಾನದಲ್ಲಿನ ಸಮಾನತೆಯ ಆಶಯದಂತೆ , ಸಮಾಜದಲ್ಲಿನ ಕಟ್ಟ ಕಡೆಯ ವ್ಯಕ್ತಿಯೂ ನೆಮ್ಮದಿಯಿಂದ ಜೀವನ ನಡೆಸಲು ಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕು. ರಾಜ್ಯದಲ್ಲಿನ ಪ್ರತಿಯೊಬ್ಬ ವ್ಯಕ್ತಿಯೂ ನೆಮ್ಮದಿಯ ಜೀವನ ನಡೆಸಲು ಅಗತ್ಯವಿರುವ ಸೌಲಭ್ಯ ಮತ್ತು ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಹೇಳಿದರು.
ಅವರು ಭಾನುವಾರ, ಕಾರವಾರದ ಪೊಲೀಸ್ ಪೆರೇಡ್ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟç ಧ್ವಜಾರೋರಣ ನೆರವೇರಿಸಿ ಮಾತನಾಡಿದರು
.
ನಮ್ಮ ಸಂವಿಧಾನವನ್ನು ದೇಶದ ಪ್ರತಿಯೊಬ್ಬ ಸಾಮಾನ್ಯ ಜನತೆಗೂ ಅನುಕೂಲವಾಗುವ ರೀತಿಯಲ್ಲಿ ರಚಿಸಲಾಗಿದ್ದು, ಸಮಾನತೆಯ ಪ್ರಮುಖ ಉದ್ದೇಶ ಹೊಂದಿದೆ. ರಾಜ್ಯದಲ್ಲಿ ಪ್ರತಿಯೊಬ್ಬ ಪ್ರಜೆಗೂ ನೆಮ್ಮದಿಯ ಜೀವನದೊಂದಿಗೆ, ಸುರಕ್ಷಿತ ಮತ್ತು ನೆಮ್ಮದಿಯ ವಾತಾವಾರಣ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅನುದಾನದ ಕೊರತೆಯಿಲ್ಲ, ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಪ್ರಥಮಾದ್ಯತೆಯನ್ನು ನೀಡಿದ್ದು ಎಲ್ಲಾ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಒದಗಿಸಲಾಗುತ್ತಿದೆ. ರೂ.2000 ಕೋಟಿ ವೆಚ್ಚದಲ್ಲಿ ಕುಡಿಯವ ನೀರಿನ ಯೋಜನೆಗಳನ್ನು ಕೈಗೊಳ್ಳಲಾಗಿದೆ. ಗೇರಸೊಪ್ಪ ಜಲಾಶಯದಲ್ಲಿ ರೂ.8000 ಕೋಟಿ ವೆಚ್ಚದಲ್ಲಿ ಜಲವಿದ್ಯುತ್ ಯೋಜನೆಗೆ ಅನುಮೋದನೆ ದೊರೆತಿದೆ. ಕಾರವಾರದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗುವುದು ಎಂದ ಸ್ಪಷ್ಟಪಡಿಸಿದ ಸಚಿವರು, ಕ್ಯಾನ್ಸರ್ ಆಸ್ಪತ್ರೆ ಕೂಡಾ ಶೀಘ್ರದಲ್ಲಿ ಕಾರ್ಯರಂಭ ಮಾಡಲಿದೆ ಎಂದರು.
ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಅತ್ಯಂತ ಯಶಸ್ವಿಯಾಗಿ ಜನತೆಗೆ ತಲುಪಿಸಿದ್ದು, ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ ರೂ.400 ಕೋಟಿ ರೂ ಮೊತ್ತದ ಉಚಿತ ಪ್ರಯಾಣ ವ್ಯವಸ್ಥೆ ಮತ್ತು ಗೃಹಲಕ್ಷಿ÷್ಕ ಯೋಜನೆಯಲ್ಲಿ 1000 ಕೋಟಿ ರೂ ಗಳ ನೆರವು ನೀಡಿದ್ದು, ಗೃಹಜ್ಯೋತಿ ಯೋಜನೆಯಡಿ ರೂ.300 ಕೋಟಿ ಮೊತ್ತದ ಉಚಿತ ವಿದ್ಯುತ್, ಅನ್ನಭಾಗ್ಯ ಯೋಜನೆಯಡಿ ರೂ. 250 ಕೋಟಿ ಹಾಗೂ ಯುವನಿಧಿ ಯೋಜನೆಯಡಿ ರೂ. 6 ಕೋಟಿ ನೆರವು ಸೇರಿದಂತೆ ಜಿಲ್ಲೆಯಲ್ಲಿ ಇದುವರೆಗೂ ರೂ.2000 ಕೋಟಿ ಗೂ ಅಧಿಕ ನೆರವು ನೀಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಪೊಲೀಸ್, ಅರಣ್ಯ, ಗೃಹರಕ್ಷಕ ದಳ, ಎನ್.ಸಿ.ಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ ತಂಡಗಳಿAದ ಆಕರ್ಷಕ ಪಥ ಸಂಚಲನ ನಡೆಯಿತು.
ಕಂದಾಯ ಇಲಾಖೆ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಜಿಲ್ಲಾ ನಗರಾಭಿವೃದ್ದಿ ಕೋಶದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಸಿಬ್ಬಂದಿಗಳಿಗೆ ಮತ್ತು ಶೈಕ್ಷಣಿಕ ಹಾಗೂ ಕ್ರೀಡಾ ವಿಭಾಗದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಫಲಾನುಭವಿಗಳಿಗೆ ವಿಶೇಷ ಆಹಾರದ ಕಿಟ್ ವಿತರಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಂದ ರಾಷ್ಟ್ರ ಪ್ರೇಮ ಮೂಡಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ ಸತೀಶ್ ಕೆ. ಸೈಲ್, ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ, ನಗರ ಸಭೆ ಅಧ್ಯಕ್ಷ ರವಿರಾಜ ಚಂದ್ರಹಾಸ ಅಕೋಲೆಕರ, ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪವಿಭಾಗಾಧಿಕಾರಿ ಕನಿಷ್ಕ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ್ ಉಪಸ್ಥಿತರಿದ್ದರು.