Saturday, June 15, 2024

ಸತ್ಯ | ನ್ಯಾಯ |ಧರ್ಮ

Big Breaking : ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪೆನ್ ಡ್ರೈವ್, ಹಾರ್ಡ್ ಡಿಸ್ಕ್ ಪತ್ತೆ

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳಿಗೆ ಹಾಸನ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದ 10 ಪೆನ್ ಡ್ರೈವ್ ಹಾಗೂ 1 ಹಾರ್ಡ್ ಡಿಸ್ಕ್ ಪತ್ತೆಯಾಗಿದೆ.

ಪ್ರೀತಂ ಗೌಡ ಆಪ್ತರಿಗೆ ಸೇರಿದ ಹಾಸನ, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ವೇಳೆ 10 ಪೆನ್ ಡ್ರೈವ್ ಗಳು, ಒಂದು ಹಾರ್ಡ್ ಡಿಸ್ಕ್ ಪತ್ತೆಯಾಗಿದೆ. ಪೆನ್ ಡ್ರೈವ್, ಹಾರ್ಡ್ ಡಿಸ್ಕ್ ಗಳನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು ಎಫ್ ಎಸ್ ಎಲ್ ಗೆ ರವಾನಿಸಿದ್ದಾರೆ.

ಈ ಮೂಲಕ ಬಿಜೆಪಿ ನಾಯಕರು ಅಶ್ಲೀಲ ಪೆನ್ ಡ್ರೈವ್ ಹಗರಣದ ಹಿಂದೆ ಇರುವ ಬಗ್ಗೆ ಮಾಹಿತಿ ಸಿಕ್ಕಂತಾಗಿದೆ. ಇನ್ನು ತನಿಖೆ ಮೂಲಕ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.

Related Articles

ಇತ್ತೀಚಿನ ಸುದ್ದಿಗಳು