ಗುಜರಾತ್: ಜನರು ತುಕ್ಡೆ-ತುಕ್ಡೆ ಗ್ಯಾಂಗ್‌ನೊಂದಿಗೆ ವೀರ್ ಸಾವರ್ಕರ್ ಅವರನ್ನು ಅವಮಾನಿಸುವುದನ್ನು ಗುಜರಾತಿನ ಜನರು ಒಪ್ಪಿಕೊಳ್ಳುವುದಿಲ್ಲ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಶನಿವಾರದಂದು ಮಾತನಾಡಿದ್ದಾರೆ.
ಗುಜರಾತ್ ಚುನಾವಣೆ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್, ʼಕಾಂಗ್ರೆಸ್ ಆಡಳಿತದಲ್ಲಿದ್ದಾಗ ಹಿಂದೂ ಭಯೋತ್ಪಾದನೆಯ ಬಗ್ಗೆ ಮಾತನಾಡುತ್ತಿದ್ದರು. ಕಾಂಗ್ರೆಸ್ ದೇಶದಲ್ಲಿ 70 ವರ್ಷಗಳಲ್ಲಿ ಸರ್ದಾರ್ ಪಟೇಲರನ್ನು ಮರೆಸುವಂತೆ ಮಾಡಿತು. ಬಿ.ಆರ್ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಗುರುತಿಸದೆ ಅವಮಾನ ಮಾಡಿತು. ಆದರೆ ಜನರು ತುಕ್ಡೆ-ತುಕ್ಡೆ ಗ್ಯಾಂಗ್‌ನೊಂದಿಗೆ ವೀರ್ ಸಾವರ್ಕರ್ ಅವರನ್ನು ಅವಮಾನಿಸುವುದನ್ನು ಗುಜರಾತಿನ ಜನರು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದರು.
ದೆಹಲಿಯಲ್ಲಿ, ಅರವಿಂದ್ ಕೇಜ್ರೀವಾಲ್ ಸತ್ಯೇಂದರ್ ಜೈನ್ ಅವರಿಗೆ ಪ್ರಾಮಾಣಿಕತೆಯ ಪ್ರಮಾಣಪತ್ರವನ್ನು ಕೊಡುತ್ತಾರೆ. ಆದರೂ ಅವರು ಕಳೆದ ಐದು ತಿಂಗಳಿಂದ ಜೈಲಿನಲ್ಲಿಯೇ ಇದ್ದಾರೆ. ಶಿಕ್ಷಣ ಸಚಿವ ಮಧ್ಯ ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿದ್ದಾರೆ. ಆದರೆ ಗುಜರಾತಿನ ಜನರೂ ಎಂದೂ ಒಪ್ಪಿಕೊಳ್ಳುವುದಿಲ್ಲ ಎಂದು ಠಾಕೂರ್ ಮಾತನಾಡಿದ್ದಾರೆ.
ಎಎಪಿ ಸುಳ್ಳು ರಾಜಕೀಯ ಮಾಡುತ್ತದೆ. ಹಕ್ಕುಗಳನ್ನು ಚಲಾಯಿಸುತ್ತದೆ ಆದರೆ ತನ್ನ ಮಾತುಗಳನ್ನು ಹಿಂಪಡೆಯುತ್ತದೆ. ಮಾಡಿದ ತಪ್ಪುಗಳಿಗೆ ಕ್ಷಮೆ ಕೇಳುತ್ತದೆ. ಭ್ರಷ್ಟಾಚಾರದ ಆರೋಪದ ಮೇಲೆ ಸಿಕ್ಕಿಬಿದ್ದಿದ ಪಂಜಾಬ್ ಆರೋಗ್ಗಯ ಸಚಿವರು 2 ತಿಂಗಳೊಳಗೆ ರಾಜೀನಾಮೆ ನೀಡಿದರು. ಮೂರು ತಿಂಗಳಲ್ಲಿ 70ಕ್ಕೂ ಹೆಚ್ಚು ಕೊಲೆ ಪ್ರಕರಣಗಳು ನಡೆದಿವೆ. ಸರ್ಕಾರ ಇದಿಯೋ ಇಲ್ಲವೋ ಗೊತ್ತಿಲ್ಲ ಎಂದು ಠಾಕೂರ್ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.