ಬೆಂಗಳೂರು : ರಾಜ್ಯದಲ್ಲಿ (Karnataka) ವಿಪರೀತ ಚಳಿ (Cold) ಆವರಿಸಿದ್ದು, ಥಂಡಿ ವಾತಾವರಣಕ್ಕೆ ಜನರು ತತ್ತರಿಸಿದ್ದಾರೆ. ಜತೆಗೆ ಡಿ. 12ರವರೆಗೆ ಮಳೆ (Rain) ಕೂಡ ಆಗಲಿದೆ.
ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಚಳಿ ಜತೆ ಮಳೆಯೂ ಕೂಡ ಸುರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಸದ್ಯ ಎಲ್ಲಾ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಿದೆ. ಶೀತಗಾಳಿ ಹಾಗೂ ಮಳೆ ಸುರಿಯುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ.
ಎಲ್ಲೆಲ್ಲಿ ಮಳೆ ?
ದಕ್ಷಿಣ ಒಳನಾಡಿನ ಬೆಂಗಳೂರು, ತುಮಕೂರು, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಈಗಾಗಲೇ ಚಳಿ ಆವರಿಸಿದೆ. ಇದೀಗ ಮುಂದಿನ ದಿನಗಳಲ್ಲಿ ಚಳಿ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಸಾಧಾರಣ ಮಳೆ ಕೂಡ ಆಗಲಿದೆ ಎಂದು ಹೇಳಿದೆ.
ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಡಿಮೆಯಾಗಿದ್ದು, ಕೆಲವೆಡೆ ಬಿಸಿಲು, ಇನ್ನೂ ಕೆಲವೆಡೆ ಚಳಿ ಹೆಚ್ಚಾಗುತ್ತಿದೆ. ಆದ್ರೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಮಾಹಿತಿ ಸಿಕ್ಕಿದೆ.
ಬೆಂಗಳೂರಲ್ಲಿ ಚಳಿ
ಬೆಂಗಳೂರಿನಲ್ಲಿ ಚಳಿ ವಿಪರೀತವಾಗಿದೆ. ಆದರೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ಚಳಿ ಜತೆಗೆ ತುಂತುರು ಮಳೆಯ ಸಾಧ್ಯತೆ ಇದೆ.
ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
