Home ರಾಜ್ಯ ವಿವಿಧ ಧರ್ಮ, ಜಾತಿಗೆ ಸೇರಿದ್ದರೂ ನಾವೆಲ್ಲ ಮನುಷ್ಯರು: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿವಿಧ ಧರ್ಮ, ಜಾತಿಗೆ ಸೇರಿದ್ದರೂ ನಾವೆಲ್ಲ ಮನುಷ್ಯರು: ಮುಖ್ಯಮಂತ್ರಿ ಸಿದ್ದರಾಮಯ್ಯ

0

ದ್ವೇಷ ಹುಟ್ಟುಹಾಕುವ ಶಕ್ತಿಗಳಿಗೆ ಮಹತ್ವ ನೀಡಬಾರದು: ರಾಜ್ಯದ ಅಭಿವೃದ್ಧಿಯ ಜತೆಗೆ ಜನತೆಯ ಪ್ರಗತಿಯೂ ಆಗಬೇಕು

ಬೆಂಗಳೂರು, ಜೂನ್ 29: ನಾವೆಲ್ಲಾರೂ ವಿವಿಧ ಧರ್ಮ, ಜಾತಿಗೆ ಸೇರಿದ್ದರೂ ನಾವೆಲ್ಲ ಮನುಷ್ಯರು. ಎಲ್ಲರೂ ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಅವರು ಇಂದು ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ನಮ್ಮ ನಮ್ಮಲ್ಲೇ ದ್ವೇಷ ಹುಟ್ಟುಹಾಕುವ ಅನೇಕ ಶಕ್ತಿಗಳಿವೆ. ಆ ಶಕ್ತಿಗಳು ಉದ್ದೇಶಪೂರ್ವಕವಾಗಿಯೇ ಇದನ್ನು ಮಾಡುತ್ತವೆ. ಅದಕ್ಕೆ ನಾವು ಸೊಪ್ಪು ಹಾಕುವುದಾಗಲಿ, ಮಹತ್ವ ನೀಡುವುದಾಗಲಿ ಮಾಡಬಾರದು. ಮನುಷ್ಯರು ಪ್ರೀತಿ, ವಿಶ್ವಾಸದಿಂದ , ಮನುಷ್ಯರಂತೆ ಬದುಕುವ ವಾತಾವರಣ ನಿರ್ಮಾಣ ಮಾಡಬೇಕಿದೆ. ರಾಜ್ಯದ ಅಭಿವೃದ್ಧಿಯ ಜೊತೆಗೆ ಜನತೆಯೂ ಅಭಿವೃದ್ಧಿ ಯಾಗಬೇಕು. ದೇವರು ಎಲ್ಲರಿಗೂ ಸದ್ಭುದ್ದಿ ನೀಡಿ ಮನುಷ್ಯರಾಗಿ ಬಾಳುವ ಗುಣವನ್ನು ನೀಡಲಿ ಎಂದರು.

ತ್ಯಾಗದ ಸಂಕೇತ
ರಾಜ್ಯದ ಮುಸಲ್ಮಾನ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ಬಕ್ರೀದ್ ಹಬ್ಬ ತ್ಯಾಗದ ಸಂಕೇತ. ಮನುಕುಲಕ್ಕೆ ಒಳ್ಳೆಯದಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿರುವುದಾಗಿ ತಿಳಿಸಿದರು.ರಾಜ್ಯದ ಅಭಿವೃದ್ಧಿಯ ಜತೆಗೆ ಜನತೆಯ ಪ್ರಗತಿಯೂ ಆಗಬೇಕು

You cannot copy content of this page

Exit mobile version