Friday, June 14, 2024

ಸತ್ಯ | ನ್ಯಾಯ |ಧರ್ಮ

ಐಎಂಸಿ ಬ್ಯಾಂಕ್ ವಿರುದ್ಧ ತನಿಖೆ ಕೋರಿ ಅರ್ಜಿ ಸಲ್ಲಿಕೆ: ಆರ್‌ಬಿಐಗೆ ಕೋರ್ಟ್ ನೋಟಿಸ್  

ಲಕ್ನೋ: ಇಂಡಿಯನ್ ಮರ್ಕೆಂಟೈಲ್ ಕೋ ಆಪರೇಟಿವ್ ಬ್ಯಾಂಕ್ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿರುವ ಮನವಿಯ ಮೇರೆಗೆ ಅಲಹಾಬಾದ್ ಹೈಕೋರ್ಟ್ ರಿಸರ್ವ್ ಬ್ಯಾಂಕ್ ಗೆ ನೋಟಿಸ್ ಜಾರಿ ಮಾಡಿದೆ.

ಈ ಹಿನ್ನಲೆಯಲ್ಲಿ ಹೈಕೋರ್ಟ್‌ನ ಲಕ್ನೋ ಪೀಠವು ಪ್ರಕರಣದ ವಿಚಾರಣೆಯನ್ನು ನವೆಂಬರ್ ಮೂರನೇ ವಾರದಲ್ಲಿ ನಿಗದಿಪಡಿಸಿದೆ.

ನ್ಯಾಯಮೂರ್ತಿಗಳಾದ ಎ.ಆರ್. ಮಸೂದಿ ಮತ್ತು ಒ.ಪಿ.ಶುಕ್ಲಾ ಅವರ ವಿಭಾಗೀಯ ಪೀಠವು ಮಂಗಳವಾರ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಮೇಲೆ ನೋಟಿಸ್ ನೀಡಿದೆ.

ಅರ್ಜಿದಾರರ ಪರ ವಕೀಲ ಅಶೋಕ್ ಪಾಂಡೆ ಅವರು ವಾದಮಂಡಿಸಿದ್ದು, ಇಂಡಿಯನ್ ಮರ್ಕೆಂಟೈಲ್ ಕೋ ಆಪರೇಟಿವ್ (ಐಎಂಸಿ) ಬ್ಯಾಂಕ್ ನಿಷೇಧದ ಹೊರತಾಗಿಯೂ ₹ 10 ಕೋಟಿ ಸಾಲ ನೀಡಿದೆ. ಹೀಗಾಗಿ ಬ್ಯಾಂಕ್ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆಯಲ್ಲಿ ತೊಡಗಿದೆ ಎಂಬ ಆರೋಪವೂ ಕೇಳಿ ಬಂದಿತ್ತು ಎಂದು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು