Monday, April 7, 2025

ಸತ್ಯ | ನ್ಯಾಯ |ಧರ್ಮ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ದಿಢೀರ್ ಏರಿಕೆ ; ಪೆಟ್ರೋಲಿಯಂ ಸಚಿವಾಲಯ

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ತಲಾ ₹2 ಹೆಚ್ಚಿಸಿದೆ ಎಂದು ಹಣಕಾಸು ಸಚಿವಾಲಯದ ಸುತ್ತೋಲೆ ಸೋಮವಾರ ತಿಳಿಸಿದೆ.

ಅಬಕಾರಿ ಸುಂಕ ಏರಿಕೆಯ ಪರಿಣಾಮ ಭಾರತದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಣನೀಯವಾಗಿ ಹೆಚ್ಚಾಗುವ ನಿರೀಕ್ಷೆಯಿದೆ. ಅಷ್ಟೇ ಅಲ್ಲದೆ ಈ ಬೆಳವಣಿಗೆ ಹಿನ್ನೆಲೆಯಲ್ಲಿ ಭಾರತದಾದ್ಯಂತ ಬೆಲೆಯೇರಿಕೆ ಬಿಸಿ ಮತ್ತಷ್ಟು ಹೆಚ್ಚಾಗುವ ಸಂಭವ ಎದುರಾಗಿದೆ.

ಜಾಗತಿಕ ತೈಲ ಬೆಲೆಗಳು ಏರಿಳಿತಕ್ಕೆ ಒಳಗಾಗುತ್ತಿರುವ ಈ ಸಮಯದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಇಲಾಖೆ ತಿಳಿಸಿದೆ.

ಈ ಅಧಿಸೂಚನೆ ಪ್ರಕಾರ ನಾಳೆಯಿಂದಲೇ ಪೆಟ್ರೋಲ್ ಡೀಸೆಲ್ ಬೆಲೆ ಮೇಲೆ ಎರಡು ರೂಪಾಯಿ ಏರಿಕೆ ಕಾಣಲಿದೆ ಎಂದು ಮಾಹಿತಿ ಲಭ್ಯವಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page