ಆರ್‌ಎಸ್‌ಎಸ್ ಕಾರ್ಯಾಧ್ಯಕ್ಷರ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಚೆನ್ನೈ: ಚೆನ್ನೈ ಸಮೀಪದ ತಾಂಬರಂನಲ್ಲಿರುವ ಚಿಟ್ಲಪಾಕ್ಕಂನಲ್ಲಿರುವ ಆರ್‌ಎಸ್‌ಎಸ್ ಕಾರ್ಯಾಧ್ಯಕ್ಷ ಸೀತಾರಾಮನ್ ಅವರ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ.

ಈ ಕುರಿತು ಮಾಹಿತಿ ನೀಡಿರುವ ಸ್ಥಳೀಯರು, ಬೆಳಗಿನ ಜಾವ 4 ಗಂಟೆ ಸುಮಾರಿಗೆ ಜೋರಾದ ಶಬ್ದ ಕೇಳಿ ಬಂತು, ಹೊರಗೆ ಬಂದು ನೂಡಿದಾಗ  ಬೆಂಕಿ ಕಾಣಿಸಿಕೊಂಡಿತು. ನಂತರ  ನಾವೇಲ್ಲ ಸೇರಿ ಬೆಂಕಿಯನ್ನು ನಂದಿಸಿ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿದೆವು. ನಾವೇಲ್ಲ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಭಾವಿಸಿದ್ದೆವು ಆದರೆ  ಕೆಲವರು ಸೀತಾರಾಮನ್ ಅವರ ಮನೆ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದು, ದೃಶ್ಯಾವಳಿಗಳು ಸಿಕ್ಕಿವೆ ಎಂದು ತಿಳಿಸಿದರು.

ಈ ಹಿನ್ನಲೆ ಪೆಟ್ರೋಲ್ ಬಾಂಬ್ ಎಸೆದ ಇಬ್ಬರು ಅಪರಿಚಿತರನ್ನು ಹಿಡಿಯಲು ತಾಂಬರಂ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಎಎನ್‌ಐನಲ್ಲಿ ವರದಿಯಾಗಿದೆ.

Related Articles

ಇತ್ತೀಚಿನ ಸುದ್ದಿಗಳು