Home ಬ್ರೇಕಿಂಗ್ ಸುದ್ದಿ ಕೇರಳದಲ್ಲಿ ಪಿಎಫ್‌ಐ ನಿಷೇಧ

ಕೇರಳದಲ್ಲಿ ಪಿಎಫ್‌ಐ ನಿಷೇಧ

0

ಕೇರಳ: ಪ್ಯಾಪ್ಯುಲರ್‌ ಆಫ್‌ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ಭಾರತದಲ್ಲಿ 5 ವರ್ಷಗಳ ಕಾಲ ಕೇಂದ್ರ ಸರ್ಕಾರ ನಿಷೇಧಿಸಿರುವ ಹಿನ್ನಲೆ ಕೇರಳದ ಪಿಣರಾಯಿ ನೇತೃತ್ವದ ಸರ್ಕಾರವು ಪಿಎಫ್‌ಐ ಹಾಗೂ ಅದರ ಸಹವರ್ತಿ ಸಂಸ್ಥೆಗಳನ್ನು ನಿಷೇಧಿಸಿದ್ದು, ಅವುಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಂಡಿದೆ.

ಈ ಕುರಿತು ಪಿಎಫ್‌ಐನ ಕೇರಳ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸತ್ತಾರ್ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ವಿಸರ್ಜಿಸಿರುವುದಾಗಿ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.

ಈ ಕುರಿತು ಅಧಿಕೃತ ಪ್ರಕಟನೆ ನೀಡಿರುವ ಅವರು, ‘ಎಲ್ಲಾ ಪಿಎಫ್‌ಐ ಸದಸ್ಯರು ಮತ್ತು ಸಾರ್ವಜನಿಕರಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು ವಿಸರ್ಜಿಸಲಾಗಿದೆ ಎಂದು ತಿಳಿಸಲು ಇಚ್ಚಿಸುತ್ತೇವೆ. ಕೇಂದ್ರ ಗೃಹ ಇಲಾಖೆ ಪಿಎಫ್‌ಐ ಅನ್ನು ನಿಷೇಧಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಹೀಗಾಗಿ ನಮ್ಮ ದೇಶದ ಕಾನೂನು ಪಾಲಿಸುವ ನಾಗರಿಕರಾಗಿ ಸಂಘಟನೆಯು ನಿರ್ಧಾರವನ್ನು ಒಪ್ಪಿಕೊಳ್ಳುತ್ತದೆ ಎಂದು ಸತ್ತಾರ್ ಹೇಳಿದ್ದಾರೆ.

ಕೆಲವುದಿನಗಳಿಂದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಜಾರಿನಿರ್ದೇಶನಾಲಯ (ಇಡಿ) ಮತ್ತು ವಿವಿಧ ರಾಜ್ಯಗಳ ಪೊಲೀಸರು ಪಿಎಫ್‌ಐ ಸಂಘಟನೆಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಕಾನೂನು ಬಾಹಿರ ಮತ್ತು ಹಿಂಸಾತ್ಮಕ ಕೃತ್ಯಗಳಲ್ಲಿ ಸಂಘಟನೆಯ ಮುಖಂಡರುಗಳು ಭಾಗಿಯಾಗಿದ್ದಾರೆ ಮತ್ತು ಸಂಘಟನೆಯು  ಐಸಿಸ್‌ ನಂತಹ ಜಾಗತಿಕ ಭಯೋತ್ಪಾದಕ ಗುಂಪುಗಳೊಂದಿಗೆ ಸಂಪರ್ಕ ಹೊಂದಿದೆ ಎಂದು ಕೇಂದ್ರ ಸರ್ಕಾರ ಐದು ವರ್ಷಗಳ ಕಾಲ ನಿಷೇಧಿಸಿತ್ತು. ಅಲ್ಲದೆ ಅದರ ಹಲವಾರು ಸಹವರ್ತಿ ಸಂಘಟನೆಗಳನ್ನು ಮತ್ತು ಅವುಗಳ ಸಾಮಾಜಿಕ ಖಾತೆಗಳು, ವೆಬ್ ಸೈಟ್ ಗಳನ್ನು ಕೂಡ ನಿಷೇಧಿಸಿ ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಿದೆ.

You cannot copy content of this page

Exit mobile version