Tuesday, January 27, 2026

ಸತ್ಯ | ನ್ಯಾಯ |ಧರ್ಮ

PFI ಬ್ಯಾನ್ ಮಾಡಲು ಕೇಂದ್ರ ಸರ್ಕಾರ ಸಿದ್ದವಾಗಿದೆ : ಯಡಿಯೂರಪ್ಪ

ಕರ್ನಾಟಕ ಸೇರಿದಂತೆ ದೇಶದ ನಾನಾ ಭಾಗದಲ್ಲಿ PFI ಕಛೇರಿ ಮತ್ತು ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಕರ್ನಾಟಕದಲ್ಲಿ 70ಕ್ಕೂ ಹೆಚ್ಚು PFI ಮುಖಂಡರನ್ನು ವಶಕ್ಕೆ ಪಡೆಯಲಾಗಿದ್ದು ಈ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಕೇಂದ್ರ ಸರ್ಕಾರ PFI ನಿಷೇಧ ಮಾಡಲು ಸಿದ್ದವಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮೊದಲೇ PFI ಬ್ಯಾನ್ ಮಾಡಬೇಕಿತ್ತು. ಸಮಗ್ರ ತನಿಖೆ ಮಾಡಿದ ಮೇಲೆ SDPI, PFI ಸಂಘಟನೆಗಳ ಷಡ್ಯಂತ್ರ ಬಯಲಾಗಲಿದೆ ಹಾಗಾಗಿ ಕೇಂದ್ರ ಸರ್ಕಾರ PFI ನಿಷೇಧ ಮಾಡಲು ಸಿದ್ದವಾಗಿದೆ ಎಂದು ಹೇಳಿದ್ದಾರೆ.

ಇನ್ನು ಪೇ ಸಿಎಂ ಕ್ಯಾಂಪನ್ ಮಾಡುತ್ತಿರುವ ಕುರಿತು ಮಾತನಾಡಿದ ಯಡಿಯೂರಪ್ಪ, ಈಗಾಗಲೇ ನಾವು ಕೇಸ್ ದಾಖಲು ಮಾಡಿದ್ದೇವೆ. ಸಿದ್ದರಾಮಯ್ಯ ವಿಪಕ್ಷ ನಾಯಕರಂತೆ ವರ್ತಿಸಲಿ, ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಇದಕ್ಕ ಕಾಂಗ್ರೆಸ್ ನಾಯಕರು ನಾಡಿನ ಜನತೆಗೆ ಉತ್ತರ ಕೊಡಬೇಕು ಎಂದಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page