ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಪಾಕಿಸ್ತಾನ ಸಾಮಾಜಿಕ ಮಾಧ್ಯಮಗಳ ಬಗ್ಗೆ ಪಿಐಬಿ ಎಚ್ಚರಿಕೆ

ಪಾಕಿಸ್ತಾನದ ಸಾಮಾಜಿಕ ಮಾಧ್ಯಮಗಳು ಭಾರತದ ವಿರುದ್ಧ ಸಂಘಟಿತ ತಪ್ಪು ಮಾಹಿತಿಗಳನ್ನು ಹರಡುತ್ತಿವೆ ಎಂದು ಪಿಬಿಐ (ಪ್ರೆಸ್ ಇನ್ ಫರ್ಮೇಷನ್ ಬ್ಯೂರೋ) ಭಾರತೀಯರಿಗೆ ಎಚ್ಚರಿಕೆ ನೀಡಿದೆ. 

ಭಾರತದ ಜನರಲ್ಲಿ ಅಪನಂಬಿಕೆ, ಆತಂಕ ಮತ್ತು ಗೊಂದಲ ಸೃಷ್ಟಿಸುವುದು ಪಾಕ್ ಮಾಧ್ಯಮಗಳ ಉದ್ದೇಶವಾಗಿದ್ದು, ಈ ರೀತಿಯ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಪಿಬಿಐ ಮನವಿ ಮಾಡಿದೆ. 

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಕುರಿತಂತೆ ಸುಳ್ಳು ಸುದ್ದಿ ಹರಡುವಂತಹ, ಅದರಲ್ಲೂ ಸಶಸ್ತ್ರ ಪಡೆಯ ಕುರಿತ ತಪ್ಪು ಮಾಹಿತಿಯನ್ನು ಪಾಕ್ ಮಾಧ್ಯಮಗಳು ಪ್ರಕಟಿಸಿದರೆ, ಅಂತಹ ಸುದ್ದಿಗಳ ಕುರಿತು #PIBFactCheck ಗೆ ರಿಪೋರ್ಟ್ ಮಾಡುವಂತೆ ಮನವಿ ಮಾಡಿಕೊಂಡಿದೆ.

ಮುಂದಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳು ಇಂತಹ ಸುಳ್ಳು ಮಾಹಿತಿಗಳಿಂದಲೇ ತುಂಬಿಹೋಗುವ ಲಕ್ಷಣಗಳಿವೆ. ಆದ್ದರಿಂದ  ಯಾವುದೇ ಮಾಹಿತಿಯನ್ನು ಕೂಲಂಕಷವಾಗಿ ಪರಿಶೀಲನೆ ನಡೆಸುವುದು ಮುಖ್ಯ ಎಂದು ಪಿಐಬಿ ತಿಳಿಸಿದೆ.

ಇಂಥಹ ಸುದ್ದಿಗಳ ಬಗ್ಗೆ ಈ ಕೆಳಗಿನ ವಾಟ್ಸ್‌ಆ್ಯಪ್ ಸಂಖ್ಯೆ, ಇಮೇಲ್ ಮೂಲಕ ಮಾಹಿತಿ ಹಂಚಿಕೊಳ್ಳಲು ಕೋರಲಾಗಿದೆ. Email:  factcheck@pib.gov.in ಅಥವಾ  91 8799711259 ನಂಬರ್‌ ಗೆ ತಿಳಿಸುವಂತೆ ಕೋರಿದೆ.

Related Articles

ಇತ್ತೀಚಿನ ಸುದ್ದಿಗಳು