Saturday, June 15, 2024

ಸತ್ಯ | ನ್ಯಾಯ |ಧರ್ಮ

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ತಡೆ ಕೋರಿ ಹೈಕೋರ್ಟಿಗೆ ಅರ್ಜಿ

ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮ ಲಲ್ಲಾ ಪ್ರಾಣ ಪ್ರತಿಷ್ಠಾ’ ಕಾರ್ಯಕ್ರಮವನ್ನು ನಿಷೇಧಿಸುವಂತೆ ಅಲಹಾಬಾದ್ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

ಉತ್ತರ ಪ್ರದೇಶದ ಗಾಜಿಯಾಬಾದ್‌ನ ಭೋಲಾ ದಾಸ್ ಎಂಬುವವರು ಈ ಅರ್ಜಿ ಸಲ್ಲಿಸಿದ್ದಾರೆ. ಶಂಕರಾಚಾರ್ಯರ ಆಕ್ಷೇಪಗಳನ್ನು ಉಲ್ಲೇಖಿಸಿ, ಸಮಾರಂಭವನ್ನು ನಿಷೇಧಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

2024ರ ಜನವರಿ 22ರಂದು ಅಯೋಧ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ನಿರ್ಮಾಣ ಹಂತದಲ್ಲಿರುವ ದೇವಾಲಯದಲ್ಲಿ ರಾಮಲಲ್ಲಾನ ವಿಗ್ರಹವನ್ನು ಸ್ಥಾಪಿಸಲಾಗುವುದು. ಸಮಾರಂಭವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಡೆಸಿಕೊಡಲಿದ್ದಾರೆ. ಶಂಕರಾಚಾರ್ಯರು ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಪೌಸ್ ಮಾಸದಲ್ಲಿ ಯಾವುದೇ ಧಾರ್ಮಿಕ ಚಟುವಟಿಕೆಗಳನ್ನು ನಡೆಸುವುದಿಲ್ಲ. ಅಲ್ಲದೆ ದೇವಾಲಯದ ಕೆಲಸ ಇನ್ನೂ ಮುಗಿದಿಲ್ಲ. ‘ಅಪೂರ್ಣ ದೇವಸ್ಥಾನದಲ್ಲಿ ಯಾವುದೇ ದೇವರನ್ನು ಪ್ರತಿಷ್ಠಾಪಿಸಬಾರದು’ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಸನಾತನ ಸಂಪ್ರದಾಯಕ್ಕೆ ವಿರುದ್ಧವಾಗಿ ಪ್ರಾಣ ಪ್ರತಿಷ್ಠೆ ಮಾಡಲಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಚುನಾವಣಾ ಉದ್ದೇಶಕ್ಕಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಈ ಆಚರಣೆಗಳನ್ನು ಆಯೋಜಿಸುತ್ತಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು