Wednesday, August 6, 2025

ಸತ್ಯ | ನ್ಯಾಯ |ಧರ್ಮ

ಅರಿಜೋನ: ವಿಮಾನ ಅಪಘಾತ ನಾಲ್ವರು ಸಾವು

ಅರಿಜೋನ: ಅಮೆರಿಕದ ಅರಿಜೋನ ವಿಮಾನ ನಿಲ್ದಾಣದ ಸಮೀಪ ಮಂಗಳವಾರ ನಡೆದ ವಿಮಾನ ಅಪಘಾತದಲ್ಲಿ ಕನಿಷ್ಠ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ರಾಷ್ಟ್ರೀಯ ಸಂಚಾರ ಸುರಕ್ಷತಾ ಬ್ಯೂರೋ ಮತ್ತು ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ ತನಿಖೆ ನಡೆಸುತ್ತಿವೆ.

ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಬೀಚ್‌ಕ್ರಾಫ್ಟ್ 300 ಎಂಬ ಸಣ್ಣ ಡ್ಯುಯಲ್-ಪ್ರೊಪೆಲ್ಲರ್ ವೈದ್ಯಕೀಯ ಸಾರಿಗೆ ವಿಮಾನವು ಮಧ್ಯಾಹ್ನದ ಸಮಯದಲ್ಲಿ ಚಿನ್ಲೆ ವಿಮಾನ ನಿಲ್ದಾಣದ ಸಮೀಪ ನೆಲಕ್ಕೆ ಅಪ್ಪಳಿಸಿದೆ. ಇದರಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ. ಅಪಘಾತದಲ್ಲಿ ಮೃತಪಟ್ಟ ನಾಲ್ವರನ್ನು ಆ ಪ್ರದೇಶದ ನಿವಾಸಿಗಳೆಂದು ಗುರುತಿಸಲಾಗಿದೆ. ವಿಮಾನವು ರೋಗಿಯೊಬ್ಬರನ್ನು ಕರೆದುಕೊಂಡು ಹೋಗಲು ಸ್ಥಳೀಯ ಆಸ್ಪತ್ರೆಗೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page