Home ವಿದೇಶ ನೈಜೀರಿಯಾ ತಲುಪಿದ ಪ್ರಧಾನಿ ಮೋದಿ, ಪ್ರಮುಖ ವಿಷಯಗಳ ಕುರಿತು ಚರ್ಚೆ

ನೈಜೀರಿಯಾ ತಲುಪಿದ ಪ್ರಧಾನಿ ಮೋದಿ, ಪ್ರಮುಖ ವಿಷಯಗಳ ಕುರಿತು ಚರ್ಚೆ

0

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 3 ರಾಷ್ಟ್ರಗಳ ಪ್ರವಾಸದ ಭಾಗವಾಗಿ ನೈಜೀರಿಯಾ ತಲುಪಿದ್ದಾರೆ. ಈ ಸಂದರ್ಭದಲ್ಲಿ ಮೋದಿಯವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು. ನೈಜೀರಿಯಾದಲ್ಲಿರುವ ಅನಿವಾಸಿ ಭಾರತೀಯರು ಮೋದಿ ಅವರನ್ನು ಸ್ವಾಗತಿಸಿದರು.

ಈ ಭೇಟಿಯ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಇಂದು (ಭಾನುವಾರ) ನೈಜೀರಿಯಾ ಅಧ್ಯಕ್ಷ ಬೋಲಾ ಅಹ್ಮದ್ ಟಿನುಬು ಅವರನ್ನು ಭೇಟಿಯಾಗಲಿದ್ದಾರೆ. ಆ ಸಭೆಯಲ್ಲಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳ ಕುರಿತು ಪ್ರಮುಖವಾಗಿ ಚರ್ಚೆ ನಡೆಯಲಿದೆ. ಆ ಬಳಿಕ ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲು ಮೋದಿ ಬ್ರೆಜಿಲ್‌ಗೆ ತೆರಳಲಿದ್ದಾರೆ. ಈ ಸಮಾವೇಶದಲ್ಲಿ ಪ್ರಧಾನಿ ಮೋದಿ ಜಿ-20 ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಿದ್ದಾರೆ.

ಅಲ್ಲದೇ ಇದೇ ತಿಂಗಳ 19ರಂದು ಪ್ರಧಾನಿ ನರೇಂದ್ರ ಮೋದಿ ಅವರು ಗಯಾನಾಗೆ ಭೇಟಿ ನೀಡಲಿದ್ದಾರೆ. ಗಯಾನಾ ಅಧ್ಯಕ್ಷ ಮೊಹಮ್ಮದ್ ಇರ್ಫಾನ್ ಅಲಿ ಅವರ ಆಹ್ವಾನದ ಮೇರೆಗೆ ಮೋದಿ ನವೆಂಬರ್ 21ರವರೆಗೆ ಆ ದೇಶದಲ್ಲಿ ಇರುತ್ತಾರೆ. ಗಯಾನಾದಲ್ಲಿ ನಡೆಯಲಿರುವ ಇಂಡಿಯಾ-ಕ್ಯಾರಿಕಾಮ್ ಸಮ್ಮೇಳನದಲ್ಲಿ ಕಾಮನ್‌ವೆಲ್ತ್ ಆಫ್ ಡೊಮಿನಿಕಾ ತನ್ನ ದೇಶದ ಅತ್ಯುನ್ನತ ಪ್ರಶಸ್ತಿಯನ್ನು ಭಾರತದ ಪ್ರಧಾನಿಗೆ ಪ್ರದಾನ ಮಾಡಲಿದೆ. ಆದರೆ, 17 ವರ್ಷಗಳ ನಂತರ ಭಾರತದ ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಆಫ್ರಿಕಾ ದೇಶಗಳಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. 50 ವರ್ಷಗಳ ನಂತರ ಭಾರತದ ಪ್ರಧಾನಿ ಗಯಾನಾಕ್ಕೆ ಭೇಟಿ ನೀಡುತ್ತಿರುವುದು ಗಮನಾರ್ಹ.

ಇನ್ನು, ನವೆಂಬರ್ 18 ಮತ್ತು 19ರಂದು ರಿಯೊ ಡಿ ಜನೈರೊದಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ, ಚೀನಾ ಅಧ್ಯಕ್ಷ ಜಿನ್ ಪಿಂಗ್, ಯುಎಸ್ ಅಧ್ಯಕ್ಷ ಜೋ ಬಿಡನ್ ಮತ್ತು ಇತರರು ಭಾಗವಹಿಸಲಿದ್ದಾರೆ. ಪ್ರಸ್ತುತ, ಭಾರತ, ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾವು ಜಿ-20 ಟ್ರೋಕಾದ ಭಾಗವಾಗಿ ಮುಂದುವರೆದಿದೆ. ಕಳೆದ ವರ್ಷ ಭಾರತದಲ್ಲಿ ಜಿ-20 ಸಮ್ಮೇಳನ ನಡೆದಿತ್ತು.. ಈಗ ಬ್ರೆಜಿಲ್‌ನಲ್ಲಿ ನಡೆಯಲಿದೆ. ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ಜಿ-20 ಶೃಂಗಸಭೆ ನಡೆಯಲಿದೆ.

You cannot copy content of this page

Exit mobile version