ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳು ಅತ್ಯಂತ ಕಳವಳಕಾರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂತಹ ಪ್ರಕರಣಗಳಲ್ಲಿ ತ್ವರಿತ ನ್ಯಾಯದಾನ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ಉಪಸ್ಥಿತಿಯಲ್ಲಿ ನಡೆದ ಜಿಲ್ಲಾ ನ್ಯಾಯಾಂಗ ರಾಷ್ಟ್ರೀಯ ಸಮ್ಮೇಳನದ ಉದ್ಘಾಟನಾ ಅಧಿವೇಶನದಲ್ಲಿ ಪ್ರಧಾನಿ ಮೋದಿ ಮಾತನಾಡಿದರು.
ಜನರಿಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ಎಂದೂ ಅಪನಂಬಿಕೆ ತೋರಿಸಿಲ್ಲ ಎಂದು ಅವರು ಹೇಳಿರು. ಇದೇ ಸಮಾವೇಶದಲ್ಲಿ ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳ ಬಗ್ಗೆ ಪ್ರಸ್ತಾಪಿಸಿದರು. ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಮಕ್ಕಳ ಸುರಕ್ಷತೆ ಕುರಿತು ಸಮಾಜಕ್ಕೆ ತೀವ್ರ ಕಳವಳಕ್ಕೆ ಒಳಗಾಗಿದೆ ಎಂದು ಹೇಳಿದರು.
“ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಎಷ್ಟು ವೇಗವಾಗಿ ನ್ಯಾಯ ಸಿಗುತ್ತದೆಯೋ, ಅವರ ಸುರಕ್ಷತೆಯು ಅಷ್ಟು ಹೆಚ್ಚಾಗುತ್ತದೆ. ದೇಶದಲ್ಲಿ ಮಹಿಳೆಯರ ಸುರಕ್ಷತೆಗಾಗಿ ಈಗಾಗಲೇ ಹಲವು ಕಠಿಣ ಕಾನೂನುಗಳು ಜಾರಿಯಲ್ಲಿವೆ. ಇಂತಹ ಪ್ರಕರಣಗಳಲ್ಲಿ ತ್ವರಿತವಾಗಿ ತನಿಖೆ ಪೂರ್ಣಗೊಳಿಸಿ ಶಿಕ್ಷೆ ವಿಧಿಸಬೇಕು.
2019ರಲ್ಲಿ, ನಾವು ಫಾಸ್ಟ್ ಟ್ರ್ಯಾಕ್ ಕೋರ್ಟ್ ಕಾಯಿದೆಯನ್ನು ತಂದಿದ್ದೇವೆ. ಈ ಕಾಯಿದೆಯಡಿ ನಾವು ಸಾಕ್ಷಿ ರಕ್ಷಣಾ ಕೇಂದ್ರಗಳನ್ನು ಸ್ಥಾಪಿಸಿದ್ದೇವೆ. ಇದರಡಿ ಜಿಲ್ಲಾ ಮಾನಿಟರಿಂಗ್ ತಂಡಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಇವುಗಳನ್ನು ಬಲಪಡಿಸುವ ಅಗತ್ಯ ಬಹಳ ಇದೆ. ಆಗ ಮಾತ್ರ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ತೀರ್ಪು ಶೀಘ್ರ ಹೊರಬೀಳಲು ಸಾಧ್ಯ ಎಂದು ಪ್ರಧಾನಿ ಮೋದಿ ಹೇಳಿದರು.