Home ದೇಶ ‘ಹಿಂಸಾಚಾರ ಕಡಿಮೆಯಾಗುತ್ತಿದೆ, ಶಾಲೆಗಳು ಪುನರಾರಂಭಗೊಳ್ಳುತ್ತಿವೆ’: ಕಡೆಗೂ ಮಣಿಪುರ ಕುರಿತು ಬಾಯ್ದೆರೆದ ಪ್ರಧಾನಿ ಮೋದಿ

‘ಹಿಂಸಾಚಾರ ಕಡಿಮೆಯಾಗುತ್ತಿದೆ, ಶಾಲೆಗಳು ಪುನರಾರಂಭಗೊಳ್ಳುತ್ತಿವೆ’: ಕಡೆಗೂ ಮಣಿಪುರ ಕುರಿತು ಬಾಯ್ದೆರೆದ ಪ್ರಧಾನಿ ಮೋದಿ

0

ಹೊಸದಿಲ್ಲಿ: ಮಣಿಪುರದಲ್ಲಿ ಹಿಂಸಾಚಾರ ನಿರಂತರವಾಗಿ ಕಡಿಮೆಯಾಗುತ್ತಿದ್ದು, ರಾಜ್ಯದ ಬಹುತೇಕ ಭಾಗದಲ್ಲಿ ಶಾಲೆಗಳು ಪುನರಾರಂಭಗೊಂಡಿವೆ ಮತ್ತು ಸಂಪೂರ್ಣ ಶಾಂತಿ ನೆಲೆಸುವಂತೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಮಾತನಾಡಿದ ಮೋದಿ, ರಾಜ್ಯದಲ್ಲಿ ಸಹಜ ಸ್ಥಿತಿ ಸ್ಥಾಪಿಸಲು ಕೇಂದ್ರವು ರಾಜ್ಯ ಸರ್ಕಾರ ಮತ್ತು ಇತರರೊಂದಿಗೆ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ಮಾಡಿದ ಭಾಷಣಕ್ಕಾಗಿ ಧನ್ಯವಾದ ಸಲ್ಲಿಸುವ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿದ ಪ್ರಧಾನಿ, ಮಣಿಪುರದಲ್ಲಿ 500ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಮತ್ತು 11,000 ಕ್ಕೂ ಹೆಚ್ಚು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಹೇಳಿದರು.

ಮಣಿಪುರವೂ ಪ್ರವಾಹ ಪರಿಸ್ಥಿತಿ ಎದುರಿಸುತ್ತಿದ್ದು, ಕೇಂದ್ರವು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಎರಡು ತಂಡಗಳನ್ನು ರಾಜ್ಯಕ್ಕೆ ರವಾನಿಸಿದೆ ಎಂದು ಮೋದಿ ಹೇಳಿದರು.

You cannot copy content of this page

Exit mobile version