25ನೇ ವಿಜಯ ದಿವಸ: ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಪ್ರಧಾನಿ ಮೋದಿ ನಮನ

ವಿಜಯ ದಿವಸದ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಯುದ್ಧದಲ್ಲಿ ಮಡಿದ ವೀರ ಯೋಧರಿಗೆ ನಮನ ಸಲ್ಲಿಸಿದರು. ಕಾರ್ಗಿಲ್‌ ಯುದ್ಧದ ನೆನಪಿನ 25ನೇ ವಿಜಯ ದಿವಸ ಅಂಗವಾಗಿ ಕಾರ್ಗಿಲ್‌ನ ದ್ರಾಸ್‌ನಲ್ಲಿರುವ ಯುದ್ಧ ಸ್ಮಾರಕಕ್ಕೆ ಮೋದಿ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರಿಗೆ ನಮನ ಸಲ್ಲಿಸಿದರು. ನಂತರ, ಹುತಾತ್ಮ ಯೋಧರ ಪತ್ನಿಯರು ಮತ್ತು ಕುಟುಂಬದ ಸದಸ್ಯರೊಂದಿಗೆ ಪ್ರಧಾನಿ ಕೆಲಕಾಲ ಸಂವಾದ ನಡೆಸಿದರು. ಆ ದಿನದ ನೆನಪುಗಳನ್ನು ಮೆಲುಕು ಹಾಕಿದರು. ಅವರ ವೀರಾವೇಶದ ಹೋರಾಟಕ್ಕೆ ಮತ್ತೊಮ್ಮೆ ನಮನ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೂ ದೇಶದ ವೀರ ಸೈನಿಕರಿಗೆ ನಮನಗಳನ್ನು ಸಲ್ಲಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು