ನ್ಯಾಯಾಲಯದ ಆದೇಶ: ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲು ಸೂಚನೆ

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಸ್ವಾಮಿ ಅವಿಮುಕ್ತೇಶ್ವರಾನಂದ ಹಾಗೂ ಅವರ ಶಿಷ್ಯರೊಬ್ಬರ ವಿರುದ್ಧ ಪ್ರಕರಣ ದಾಖಲಿಸುವಂತೆ ಪ್ರಯಾಗರಾಜ್ ನಗರದ ಪೋಕ್ಸೊ ಪ್ರಕರಣಗಳ ವಿಶೇಷ ನ್ಯಾಯಾಲಯ ಶನಿವಾರ ಆದೇಶಿಸಿದೆ.

ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ವಿನೋದ್ ಕುಮಾರ್ ಚೌರಾಸಿಯಾ ಅವರು ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ನ್ಯಾಯಾಲಯದ ಆದೇಶದಂತೆ ಝೂಸಿ ಪೊಲೀಸ್ ಠಾಣೆಯಲ್ಲಿ ಸ್ವಾಮಿ ಅವಿಮುಕ್ತೇಶ್ವರಾನಂದ ಮತ್ತು ಅವರ ಶಿಷ್ಯರ ವಿರುದ್ಧ ಎಫ್‌ಐಆರ್ ದಾಖಲಾಗಿರುವುದಾಗಿ ಮೂಲಗಳು ತಿಳಿಸಿವೆ.

ವಾರಾಣಸಿಯಲ್ಲಿ ಇರುವ ಆಶ್ರಮದಲ್ಲಿ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್ ಅಧ್ಯಕ್ಷ ಅಶುತೋಷ್ ಬ್ರಹ್ಮಚಾರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯ ವೇಳೆ ಇಬ್ಬರು ಮಕ್ಕಳ ಹೇಳಿಕೆಗಳನ್ನು ದಾಖಲಿಸಿಕೊಂಡ ನ್ಯಾಯಾಲಯ, ಪೊಲೀಸರ ಪ್ರಾಥಮಿಕ ವರದಿಯನ್ನು ಪರಿಶೀಲಿಸಿ ತೀರ್ಪನ್ನು ಕಾಯ್ದಿರಿಸಿತ್ತು.

ಅರ್ಜಿದಾರರು ಪ್ರಕರಣಕ್ಕೆ ಸಂಬಂಧಿಸಿದ ಸಿಡಿ (CD) ಯನ್ನೂ ನ್ಯಾಯಾಲಯಕ್ಕೆ ಸಲ್ಲಿಸಿರುವುದಾಗಿ ತಿಳಿಸಿದ್ದು, ಆ ದಾಖಲೆಗಳ ಆಧಾರದ ಮೇಲೂ ತನಿಖೆ ಮುಂದುವರಿಯಲಿದೆ.

Related Articles

ಇತ್ತೀಚಿನ ಸುದ್ದಿಗಳು