Sunday, June 16, 2024

ಸತ್ಯ | ನ್ಯಾಯ |ಧರ್ಮ

ಪೋಕ್ಸೋ ಪ್ರಕರಣ: ಪ್ರಾಚಾರ್ಯ ಸೇರಿದಂತೆ ಇಬ್ಬರ ಬಂಧನ

ಕಲ್ಬುರ್ಗಿ: ಕಲಬುರಗಿ ಜಿಲ್ಲೆಯ ಚಿಂಚೂಳಿ ತಾಲೂಕಿನಲ್ಲಿ ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ, ಶಾಲೆಯ ಪ್ರಾಚಾರ್ಯ ಸೇರಿದಂತೆ ಇಬ್ಬರನ್ನು ತಾಲೂಕಿನ ಕುಂಚಾವರಂ ಠಾಣೆ ಪೋಲೀಸರು ಬಂಧಿಸಿದ್ದಾರೆ.

ಶಾಲೆಯ ಕೆಲವು ವಿಧ್ಯಾರ್ಥಿನಿಯರು ಅನಾರೋಗ್ಯವೆಂದು ಆಸ್ಪತ್ರೆಗೆ ಹೋದಾಗ ಅಲ್ಲಿನ ವೈಧ್ಯರು ವಿಧ್ಯಾರ್ಥಿನಿಯರ ದಿನಚರಿ ಪ್ರಶ್ನಿಸಿದ್ದಾರೆ. ಆಗ ವಿಧ್ಯಾರ್ಥಿನಿಯರು ಕೆಲವು ದಿನಗಳಿಂದ ಶಾಲೆಯ ಪ್ರಾಚಾರ್ಯ ಮತ್ತು  ಕಂಪ್ಯೂಟರ್‌ ಅಪರೇಟರ್‌ ಇಬ್ಬರು ರಾತ್ರಿ ಬಂದು ತಮ್ಮ ಮೂಟ್ಟುವ ಮೂಲಕ ಕಿರಿಕಿರಿ ಮಾಡುತ್ತಿದ್ದು, ಈ ಕಿರಿಕಿರಿಯಿಂದಾಗಿ ಮೈಕೀ ನೋವು ಮತ್ತು ಅನಾರೋಗ್ಯವೆನಿಸುತ್ತಿದೆ ಎಂದು ಹೇಳಿದಾಗ, ಈ ವಿಷಯವನ್ನು ವೈದ್ಯರು ಕೂಡಲೆ ಪೊಲೀಸರ ಗಮನಕ್ಕೆ ತಂದಿದ್ದಾರೆ.

ವಿಚಾರದ ಹಿನ್ನಲೆ ಸಮಾಜ ಕಲ್ಯಾಣಾಧಿಕಾರಿ ಅವರು ವಿಧ್ಯಾರ್ಥಿನಿಯರ ಜೊತೆ ಮಾತನಾಡಿ ಸಮಗ್ರ ಮಾಹಿತಿ ಸಂಗ್ರಹಿಸಿದ ಮೇಲೆ  ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದರಿಂದ, ಪೊಲೀಸರು ಪ್ರಾಚಾರ್ಯ ಮತ್ತು ಕಂಪ್ಯೂಟರ್‌ ಅಪರೇಟರ್‌ ಮೇಲೆ ಪೋಕ್ಸೋ ಕಾಯ್ದೆಯಡಿ ಪರಕರಣ ದಾಖಲಿಸಿದ್ದಾರೆ.

ತಮ್ಮ ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ತಿಳಿದು ಆಕ್ರೋಶಗೊಂಡ ಪೋಷಕರು, ಸಿಬ್ಬಂದಿಗಳನ್ನು ಥಳಿಸಿದ್ದಾರೆ. ಈ ವಿಚಾರ ತಿಳಿದ ಜಿಲ್ಲಾಧಿಕಾರಿ ಯಶವಂತ್‌ ವಿ. ಗುರುಕರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿಗಳನ್ನು ಸೇಯಿಂದ ಅಮಾನತುಗೊಳಿಸಿದ್ದು, ಶಾಲೆಗೆ ಮಹಿಳಾ ವಾರ್ಡನ್‌, ಕಂಪ್ಯೂಟರ್‌ ಅಪರೇಟರ್‌ ಮತ್ತು ಮಹಿಳಾ ಪ್ರಾಚಾರ್ಯರನ್ನು ನೀಯೋಜಿಸಲು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

Related Articles

ಇತ್ತೀಚಿನ ಸುದ್ದಿಗಳು