ಚಿತ್ರದುರ್ಗ: ಮಠದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಹಿನ್ನಲೆ, ಪೋಕ್ಸೋ ಪ್ರಕರಣದ ಅಡಿಯಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಸ್ವಾಮೀಜಿ ಅವರಿಗೆ ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್ ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಿದೆ.
ಬುಧವಾರದಂದು ಶಿವಮೂರ್ತಿ ಸ್ವಾಮೀಜಿಯ ನ್ಯಾಯಾಂಗ ಬಂಧನ ಅಂತ್ಯವಾಗಿದ್ದರಿಂದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಇದೀಗ ಮತ್ತೆ ಸೆಪ್ಟಂಬರ್ 14 ದಿನಗಳ ಕಾಲ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
ಈ ಪ್ರಕರಣದ ಎ2 ಆರೋಪಿ ಹಾಸ್ಟೆಲ್ ವಾರ್ಡನ್ ರಶ್ಮಿ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ಸೆಪ್ಟೆಂಬರ್ 27ರವರೆಗೆ ವಿಸ್ತರಣೆ ಮಾಡಿದ್ದು, ಪ್ರಕರಣದ 4ನೇ ಆರೋಪಿ ಮಠದ ಕಾರ್ಯದರ್ಶಿ ಪರಮಶಿವಯ್ಯ ಮತ್ತು 5ನೇ ಆರೋಪಿ ವಕೀಲ ಗಂಗಾಧರಯ್ಯ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ.