ಪೋಕ್ಸೋ ಪ್ರಕರಣ ; ಯಡಿಯೂರಪ್ಪರನ್ನು ಬಂಧಿಸದಂತೆ ಆದೇಶ

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠವು ಮಧ್ಯಂತರ ಆದೇಶದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಆದೇಶಿಸಿದೆ.

ಬಿಎಸ್ ಯಡಿಯೂರಪ್ಪ ಅವರು ಪ್ರಕರಣ ರದ್ದುಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆಯನ್ನು ಸೆ. 5 ಕ್ಕೆ ಮುಂದೂಡಿದೆ. ಸಧ್ಯ ಬಂಧನದ ಭೀತಿಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಈ ವರ್ಷದ ಮಾರ್ಚ್ 3 ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ದೂರಿನ ಆಧಾರದ ಮೇಲೆ ಎಫ್‌ಐಆರ್ ಕೂಡ ದಾಖಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು