ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವೇಶ್ವರ ನಗರ ಠಾಣೆಯ ಪೊಲೀಸರು ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಗೆ ನೋಟಿಸ್ ನೀಡಿ ಠಾಣೆಗೆ ಕರೆಸಲಾಗಿತ್ತು. ನಂತರದ ಬೆಳವಣಿಗೆಯಾಗಿ ರಜತ್ ನನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಹಿಂದೆ ರಜತ್ ಮತ್ತು ಮತ್ತೋರ್ವ ಬಿಗ್ ಬಾಸ್ ಮಾಜಿ ಸ್ಪರ್ಧಿ ವಿನಯ್ ನನ್ನು ಪ್ರಕರಣದ ಸಂಬಂಧ ಪರಪ್ಪನ ಅಗ್ರಹಾರ ಜೈಲಿಗೆ ಹಾಕಲಾಗಿತ್ತು. ಜಾಮೀನಿನ ನಂತರ ಇಬ್ಬರೂ ಬಿಡುಗಡೆಗೊಂಡ ನಂತರ ಈಗ ಮತ್ತೊಮ್ಮೆ ರಜತ್ ನನ್ನು ಬಂಧಿಸಲಾಗಿದೆ.
ಈ ಹಿಂದೆ ವಿಚಾರಣೆ ವೇಳೆ ರೀಲ್ಸ್ ನಲ್ಲಿ ಬಳಸಲಾಗಿದ್ದ ಮಾರಕಾಸ್ತ್ರ ಫೈಬರ್ ನದ್ದು, ಅದು ಒರಿಜಿನಲ್ ಅಲ್ಲ ಎಂದು ರಜತ್ ಹೇಳಿಕೆ ನೀಡಿದ್ದರು. ಜೊತೆಗೆ ಅದನ್ನು ರಾಜ ಕಾಲುವೆಗೆ ಎಸೆದಿದ್ದೇನೆ ಎಂದು ಹೇಳಿಕೆ ನೀಡಿದ್ದರು. ಆದರೆ ಈಗ ಮಾರಕಾಸ್ತ್ರ ಪತ್ತೆಯಾಗದ ಹಿನ್ನೆಲೆಯಲ್ಲಿ ರಜತ್ ನನ್ನು ಮತ್ತೊಮ್ಮೆ ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೆಲ ದಿನಗಳ ಹಿಂದೆ ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಶಸ್ತ್ರಾಸ್ತ್ರ ತಡೆ ಕಾಯ್ದೆಯಡಿ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಹಾಗೂ ರಜತ್ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.