ಗುಜರಾತ್: ಆಮ್ ಆದ್ಮಿ ಪಕ್ಷದ ಕಚೇರಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನುವ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಬೆಳಕಿಗೆ ಬಂದಿದ್ದು, ಅದು ಸುಳ್ಳು ಎಂದು ಅಹಮದಾಬಾದ್ ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ಆಮ್ ಆದ್ಮಿ ಪಕ್ಷದ ಮೇಲೆ ಅಂತಹ ಯಾವುದೇ ದಾಳಿ ನಡೆದಿಲ್ಲ, ಇದು ಸಾಮಾಜಿಕ ಜಾಲಾತಾಣದಲ್ಲಿ ಯಾರೋ ಕಿಡಿಗೇಡಿಗಳು ಹಬ್ಬಿಸಿರುವ ಸುಳ್ಳು ಸುದ್ದಿಯಾಗಿದ್ದು, ಈ ಹಿನ್ನಲೆ ಸುಳ್ಳು ಸುದ್ದಿ ಹಬ್ಬಿಸಿರುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.