Tuesday, January 27, 2026

ಸತ್ಯ | ನ್ಯಾಯ |ಧರ್ಮ

ರಾಜ್ಯದಾದ್ಯಂತ ಪಿಎಫ್‌ಐ ಕಾರ್ಯಕರ್ತರ ಮೇಲೆ ಪೊಲೀಸ್‌ ದಾಳಿ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಯ ಕಾರ್ಯಕರ್ತರ ಮೇಲೆ ಪೊಲೀಸರು ದಾಳಿ ನಡೆಸಿದ್ದು ಸಂಘಟನೆಯ ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

ಜಿಲ್ಲಾದಾದ್ಯಂತ ಏಕಕಾಲದಲ್ಲಿ ದಾಳಿ ಮುಂದುವರೆಸಿರುವ ಪೊಲೀಸರು, ಚಾಮರಾಜನಗರ, ಮಂಗಳೂರು, ಬಾಗಲಕೋಟೆ, ರಾಮನಗರ, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮಂತರ, ಕೋಲಾರ, ಮೈಸೂರು ಜಿಲ್ಲೆಯಲ್ಲೂ ದಾಳಿ ನಡೆದಿದ್ದು, 40ಕ್ಕೂ ಹೆಚ್ಚು ಪಿಎಫ್‌ಐ ಮಖಂಡರನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ ಪಿಎಫ್‌ಐ ಕಾರ್ಯಕರ್ತರು ಮತ್ತು ನಾಯಕರಿಗೆ ಸೇರಿದ ಸ್ಥಳ, ಕಚೇರಿ ಮತ್ತು ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಕಾನೂನು ಬಾಹಿರ ಚಟುವಟಿಕೆಗಳಿಗೆ ಹಣಕಾಸಿನ ನೆರವನ್ನು ಪಡೆದ ಅನುಮಾನದ ಮೇಲೆ ಈ ಮಹತ್ವದ ಕಾರ್ಯಚರಣೆ ನಡೆಸಲಾಗಿದ್ದು, ಕೆಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page