ಪೊಲೀಸ್‌ ಬಿಗಿ ಭದ್ರತೆಯಲ್ಲೂ ಪ್ರತಿಭಟನೆಗೆ ಮುಂದಾದ ರೈತರು

ನವದೆಹಲಿ: ಭಾರೀ ಪೊಲೀಸ್ ಭದ್ರತೆಯ ನಡುವೆ ನಿರುದ್ಯೋಗದ ವಿರುದ್ಧ ಪ್ರತಿಭಟನೆ ನಡೆಸಲು ರೈತರು ಜಂತರ್ ಮಂತರ್‌ಗೆ ಆಗಮಿಸಲು ಪ್ರಾರಂಭಿಸಿದ್ದಾರೆ.ಈ ಹಿನ್ನಲೇಯಲ್ಲಿ ದೆಹಲಿಯ ಮೂರು ಗಡಿ ಪ್ರವೇಶ ಬಿಂದುಗಳಾದ ಗಾಜಿಪುರ, ಸಿಂಘು ಮತ್ತು ಟಿಕ್ರಿಯಲ್ಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ.
ಏತನ್ಮಧ್ಯೆ, ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಲು ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದು, ನವದೆಹಲಿಯಲ್ಲಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಲಾಗಿದೆ.

ಆದರೂ ಕೂಡ ಜಂತರ್ ಮಂತರ್‌ನಲ್ಲಿ ರೈತರು ಇಂದು ಪ್ರತಿಭಟನೆ ನಡೆಸಲಿದ್ದಾರೆ.ಈ ಕಾರಣ ದಿನದ ಮಟ್ಟಿಗೆ ದೆಹಲಿ ಪೊಲೀಸರು ಸಿಮೆಂಟ್ ಬ್ಯಾರಿಕೇಡ್‌ಗಳನ್ನು ಹಾಕಿ, ದೆಹಲಿ-ಹರಿಯಾಣ, ಟಿಕ್ರಿ ಗಡಿಯಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಆದರೂ ಕೂಡ ರೈತರು ಯಾವುದನ್ನು ಲೆಕ್ಕಿಸದೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು