Home ಅಪರಾಧ ಹೊಸ ವರ್ಷಾಚರಣೆ ವೇಳೆಯೇ ಫಾರ್ಮ್‌ಹೌಸ್ ಮೇಲೆ ಪೊಲೀಸರ ಮಧ್ಯರಾತ್ರಿ ದಾಳಿ

ಹೊಸ ವರ್ಷಾಚರಣೆ ವೇಳೆಯೇ ಫಾರ್ಮ್‌ಹೌಸ್ ಮೇಲೆ ಪೊಲೀಸರ ಮಧ್ಯರಾತ್ರಿ ದಾಳಿ

0

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಹಳ್ಳಿಯಲ್ಲಿ ಅನುಮತಿ ಪಡೆಯದೇ ಅಕ್ರಮವಾಗಿ ನಡೆಯುತ್ತಿದ್ದ ಹೊಸ ವರ್ಷಾಚರಣೆ ಪಾರ್ಟಿ ಮೇಲೆ ಪೊಲೀಸರು ಮಧ್ಯರಾತ್ರಿ ದಾಳಿ ನಡೆಸಿದ್ದಾರೆ.

ಹೆಗ್ಗಡಹಳ್ಳಿಯ ಫಾರ್ಮ್‌ಹೌಸ್ ಒಂದರಲ್ಲಿ ಜೋರಾದ ಸಂಗೀತದೊಂದಿಗೆ ಹೊಸ ವರ್ಷಾಚರಣೆಯನ್ನು ಅಕ್ರಮವಾಗಿ ಸಂಭ್ರಮಿಸಲಾಗುತ್ತಿದ್ದು, ಸುಮಾರು 40 ರಿಂದ 50 ಯುವಕರು ಪಾರ್ಟಿಯಲ್ಲಿ ಭಾಗವಹಿಸಿದ್ದರು. ಯಾವುದೇ ಅಧಿಕೃತ ಅನುಮತಿ ಪಡೆಯದೇ ಶಬ್ದ ಮಾಲಿನ್ಯ ಉಂಟುಮಾಡಿ ಮೋಜು-ಮಸ್ತಿಯಲ್ಲಿ ತೊಡಗಿದ್ದುದಾಗಿ ತಿಳಿದುಬಂದಿದೆ.

ಅತಿಯಾದ ಶಬ್ದದಿಂದ ತೊಂದರೆ ಆಗುತ್ತಿದೆ ಎಂದು ಸ್ಥಳೀಯರು ದೂರು ನೀಡಿದ ಹಿನ್ನೆಲೆಯಲ್ಲಿ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಾದಿಕ್ ಪಾಷಾ ಅವರ ನೇತೃತ್ವದಲ್ಲಿ ಪೊಲೀಸ್ ತಂಡ ಸ್ಥಳಕ್ಕೆ ದಾಳಿ ನಡೆಸಿತು. ಪೊಲೀಸರು ಪಾರ್ಟಿಯನ್ನು ತಕ್ಷಣ ಸ್ಥಗಿತಗೊಳಿಸಿ, ಸ್ಥಳದಲ್ಲಿದ್ದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಫಾರ್ಮ್‌ಹೌಸ್ ಮಾಲೀಕ ಹಾಗೂ ಪಾರ್ಟಿ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

You cannot copy content of this page

Exit mobile version