Wednesday, June 26, 2024

ಸತ್ಯ | ನ್ಯಾಯ |ಧರ್ಮ

ಕೋಲಾರ| ಅಪ್ರಾಪ್ತ ವಯಸ್ಸಿನ ಬಾಲಕನನ್ನು ಕೊಂದಿದ್ದ ಇಬ್ಬರು ಕಾನೂನು ಸಂಘರ್ಷದಲ್ಲಿದ್ದ ಅಪ್ರಾಪ್ತರ ಮೇಲೆ ಗುಂಡು ಹಾರಿಸಿದ ಪೊಲೀಸರು

ಕೋಲಾರ: ಕಾರ್ತಿಕ್‌ ಎನ್ನುವ ಅಪ್ರಾಪ್ತ ಬಾಲಕನನ್ನು ಕೊಂದ ಆರೋಪದಡಿ ಇಬ್ಬರು ಕಾನೂನು ಸಂಘರ್ಷದಲ್ಲಿರುವ ಅಪ್ರಾಪ್ತರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಕಾನೂನು ಸಂಘರ್ದಲ್ಲಿರುವ ಅಪ್ರಾಪ್ತ ಯುವಕನು 17 ವರ್ಷದ ಕಾರ್ತಿಕ್ ಸಿಂಗ್ ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಿದ್ದು, ಜಿಲ್ಲೆಯಲ್ಲಿ ದೊಡ್ಡ ರೌಡಿಯಾಗಲೆಂದು ತಾನು ಈ ಕೃತ್ಯ ಎಸಗಿರುವುದಾಗಿ ಹೇಳಿಕೆ ನೀಡಿದ್ದಾನೆ.

ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನವೆಂಬರ್‌ ನಾಲ್ಕರಂದು ಈ ಕೊಲೆ ನಡೆದಿತ್ತು.

ಸಂತ್ರಸ್ತನ ದೇಹದಾದ್ಯಂತ ಚಾಕುಗಳು ಮತ್ತು ಆಕ್ಸೆಲ್ ಬ್ಲೇಡ್‌ಗಳಿಂದ ಹಲ್ಲೆ ನಡೆಸಲಾಗಿತ್ತು ಮತ್ತು ಕೊಲೆ ಆರೋಪ ಎದುರಿಸುತ್ತಿರುವವರಲ್ಲಿ ಪ್ರಮುಖನಾದ ಕಾನೂನು ಸಂಘರ್ಷದಲ್ಲಿರುವ ಬಾಲಕನು ಕೊಲೆಯಾದ ಬಾಲಕನ ಮುಖ ಮತ್ತು ದೇಹದ ಮೇಲೆ ತನ್ನ ಹೆಸರಿನ ಮೊದಲ ಅಕ್ಷರವನ್ನು ಕೆತ್ತಿದ್ದಾನೆ.

ಇಂತಹ ಅನಾಗರಿಕತೆಯನ್ನು ಪ್ರದರ್ಶಿಸಿದ ಈ ಬಾಲಕರ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳುವಂತೆ ಸಂತ್ರಸ್ತ ಬಾಲಕನ ಪೋಷಕರು ಪೊಲೀಸರನ್ನು ಒತ್ತಾಯಿಸಿದ್ದಾರೆ.

ಪೊಲೀಸರ ಪ್ರಕಾರ, ಮುಳಬಾಗಲು ಪೊಲೀಸ್ ಇನ್ಸ್‌ಪೆಕ್ಟರ್ ವಿಠಲ್ ತಳವಾರ ನೇತೃತ್ವದ ತಂಡವು ಇಬ್ಬರನ್ನು ಬಂಧಿಸಲು ಹೋಗುತ್ತಿದ್ದಾಗ ಮುಳಬಾಗಲು ತಾಲೂಕಿನ ದೇವರಾಯಸಮುದ್ರ ಗ್ರಾಮದ ಬಳಿ ಬಾಲಕರು ಅವರ ಮೇಲೆ ದಾಳಿ ಎಸಗಿದ್ದಾರೆ.

ಈ ಸಂದರ್ಭದಲ್ಲಿ ಆತ್ಮ ರಕ್ಷಣೆಗಾಗಿ ಪೊಲೀಸರು ಇಬ್ಬರ ಕಾಲಿಗೆ ಗುಂಡು ಹೊಡೆದಿದ್ದಾರೆ. ಘಟನೆಯಲ್ಲಿ ಪಿಎಸ್‌ಐ ಹಾಗೂ ಇಬ್ಬರು ಪೊಲೀಸರು ಗಾಯಗೊಂಡಿದ್ದು, ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಹಿಂದೆ ಕೊಲೆ ಪ್ರಕರಣದ ಕುರಿತು ನಿರ್ಲಕ್ಷ್ಯ ತೋರಿಸಿದ್ದಕ್ಕಾಗಿ ಕೋಲಾರ ಎಸ್ಪಿ ಎಂ.ನಾರಾಯಣ ಅವರು ಈ ಹಿಂದೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದರು.

ಈ ಭೀಕರ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಸಾಮಾಜಿಕ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ‘ಕೋಲಾರ ಉಳಿಸಿ, ಯುವಕರನ್ನು ಉಳಿಸಿ’ ಅಭಿಯಾನ ಆರಂಭಿಸಿದ್ದರು.

ಪೊಲೀಸ್ ಇಲಾಖೆ ವತಿಯಿಂದ ಜಿಲ್ಲೆಯ ಕಾಲೇಜುಗಳಲ್ಲಿ ವಿದ್ಯಾರ್ಥಿ ಸಮುದಾಯಕ್ಕೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತವು ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಪ್ರದೇಶದಲ್ಲಿ ಅಪರಾಧಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದೆ.

Related Articles

ಇತ್ತೀಚಿನ ಸುದ್ದಿಗಳು