Saturday, January 10, 2026

ಸತ್ಯ | ನ್ಯಾಯ |ಧರ್ಮ

ಸಮೀರ್‌ ಎಂಡಿ ಮನೆಯನ್ನು ಸುತ್ತುವರಿದ ಪೊಲೀಸರು

ಬೆಂಗಳೂರು: ಯೂಟ್ಯೂಬರ್ ಸಮೀರ್ ಎಮ್ ಡಿ ಯ ಬೆಂಗಳೂರಿನ ಮನೆಯನ್ನು ಧರ್ಮಸ್ಥಳ ಪೊಲೀಸರು ಸುತ್ತುವರೆದಿದ್ದಾರೆ. ಸಮೀರ್‌ ಎಂ ಡಿ ಮಾಡಿದ ಸೌಜನ್ಯ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿ ವಿಡಿಯೋ ವೈರಲ್‌ ಆಗಿತ್ತು. ಈ ವಿಡಿಯೋ ಸಾಕಷ್ಟು ಚರ್ಚೆಗೆ ಘ್ರಾಸವಾಗಿತ್ತು. ಧರ್ಮಸ್ಥಳ ಮಂಜುನಾಥ ದೇವಾಲಯ ಮತ್ತು ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ಬಗ್ಗೆ ಅವಹೇಳನಕಾರಿ ವೀಡಿಯೋ ಮಾಡಿದ್ದಾರೆ ಎಂದು ಹೆಗ್ಗಡೆ ಪರ ಗುಂಪು ವಾದಿಸಿತ್ತು.

ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಸಂಬಂಧ ನೋಟಿಸ್‌ ನೀಡಿದರೂ ಠಾಣೆಗೆ ವಿಚಾರಣೆಗೆ ಹಾಜರಾಗದ ಇದ್ದರಿಂದ ವಾರೆಂಟ್ ಜೊತೆ ಧರ್ಮಸ್ಥಳ ಪೊಲೀಸ್ ಸಬ್ ಇನ್ಸೆಕ್ಟರ್ ಅನಂದ್.ಎಮ್ ನೇತೃತ್ವದ ತಂಡ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಸಮೀರ್‌ ಅವರ ಬಾಡಿಗೆ ಮನೆಯನ್ನು ಆ.21 ರಂದು ಸುತ್ತುವರಿದ್ದಾರೆ ಎನ್ನಲಾಗಿದೆ. ಈ ವಿಚಾರವನ್ನು ಸೌಜನ್ಯ ನ್ಯಾಯ ಹೋರಾಟಗಾರ ಗಿರೀಶ್ ಮಟ್ಟಣವರ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ಈಗಾಗಲೇ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page