Home ಬೆಂಗಳೂರು ದೇವೇಗೌಡ ಪತ್ಮಿ ಚೆನ್ನಮ್ಮ ನಿಧನಕ್ಕೆ ಗಣ್ಯರ ಜೊತೆಗೆ ರಾಜಕೀಯ ನಾಯಕರಿಂದ ಸಂತಾಪ

ದೇವೇಗೌಡ ಪತ್ಮಿ ಚೆನ್ನಮ್ಮ ನಿಧನಕ್ಕೆ ಗಣ್ಯರ ಜೊತೆಗೆ ರಾಜಕೀಯ ನಾಯಕರಿಂದ ಸಂತಾಪ

ಬೆಂಗಳೂರು : ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿಮ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ (Chennamma Deve Gowda)  ಅವರು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಇದೀಗ ಚೆನ್ನಮ್ಮ ಅವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದು, ಸಿಎಂ ಡಿಕೆ ಶಿವಕುಮಾರ್‌ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕರು ಕಂಬಿನಿ ಮಿಡಿದಿದ್ದಾರೆ.

ಅನೇಕ ರಾಜಕೀಯ ನಾಯಕರು ಈ ವಿಚಾರವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದು, ಚೆನ್ನಮ್ಮ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಸಹ ಚೆನ್ನಮ್ಮ ನಿಧನಕ್ಕೆ ಸಂತಾಪ ಸೂಚಿಸಿದ್ದು, ಕುಟುಂಬದವರಿಗೆ ಸಾಂತ್ವಾನ ಹೇಳಿದ್ದಾರೆ.

ಚೆನ್ನಮ್ಮ ಒಬ್ಬ ಒಬ್ಬ ಆದರ್ಶ ಗೃಹಿಣಿ: ಸಿದ್ದರಾಮಯ್ಯ
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ನಿಧನದಿಂದ ದುಃಖಿತನಾಗಿದ್ದೇನೆ. ಜನತಾ ಪರಿವಾರದಲ್ಲಿದ್ದ ನಾನು ದೇವೇಗೌಡರ ಕುಟುಂಬದೊಂದಿಗೆ ನಿಕಟವಾದ ಒಡನಾಟ ಇಟ್ಟುಕೊಂಡವನಾಗಿ ಚೆನ್ನಮ್ಮನವರನ್ನು‌ ಸಮೀಪದಿಂದ ಬಲ್ಲವನು. ಚೆನ್ನಮ್ಮನವರು ತಮ್ಮ ಜೀವನದಲ್ಲಿ ಎದುರಾದ ಕಷ್ಟ – ನೋವುಗಳಿಂದ ಕುಗ್ಗದೆ, ಎಲ್ಲವನ್ನೂ ಧೈರ್ಯದಿಂದ ಎದುರಿಸಿದ್ದ ಗಟ್ಟಿಗಿತ್ತಿ. ದೇವೇಗೌಡರ ರಾಜಕೀಯ ಜೀವನದ ಏಳುಬೀಳಿನ ನಡುವೆ ದೊಡ್ಡ ಕುಟುಂಬವನ್ನು ಪೊರೆಯುತ್ತಾ ಬಂದ ಅವರು ಒಬ್ಬ ಆದರ್ಶ ಗೃಹಿಣಿಯಾಗಿದ್ದರು. ಮಾಜಿ ಪ್ರಧಾನಿಗಳ ಮಡದಿಯಾಗಿದ್ದರೂ ಯಾವ ಹಮ್ಮು ಬಿಮ್ಮು ಇಲ್ಲದೆ ಎಲ್ಲರನ್ನೂ ಅಕ್ಕರೆಯಿಂದ ಕಾಣುತ್ತಿದ್ದ ಚೆನ್ನಮ್ಮನವರು, ಮಾದರಿ ಸತಿಯಾಗಿ ತುಂಬು ಜೀವನ ಸಾಗಿಸಿದವರು. ದೀರ್ಘಕಾಲದ ಸಂಗಾತಿಯನ್ನು ಈ ಇಳಿವಯಸ್ಸಿನಲ್ಲಿ ಕಳೆದುಕೊಂಡ ದೇವೇಗೌಡರಿಗೆ ದು:ಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ. ಗೌಡರ ಕುಟುಂಬ ಸದಸ್ಯರಿಗೆ ನನ್ನ ಸಂತಾಪಗಳು. ಅವರ ನೋವಿನಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ.

ನೆನಪು ನಮ್ಮೆಲ್ಲರಲ್ಲಿ ಸದಾ ಚಿರಸ್ಮರಣೀಯವಾಗಿರಲಿದೆ: ವಿ ಸೋಮಣ್ಣ
ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.ಡಿ ದೇವೇಗೌಡ ಅವರ ಧರ್ಮಪತ್ನಿ ಹಾಗೂ ಅತ್ಯಂತ ಸರಳ-ಸಜ್ಜನಿಕೆಯ ಮನೋಭಾವದವರಾಗಿದ್ದ ಶ್ರೀಮತಿ ಚೆನ್ನಮ್ಮ ಅವರು ದೈವಾಧೀನರಾದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಅಘಾತವಾಗಿದೆ. ಶ್ರೀ ಹೆಚ್.ಡಿ ದೇವೇಗೌಡ ಅವರ ಯಶಸ್ವಿ ರಾಜಕಾರಣದಲ್ಲಿ ಶ್ರೀಯುತರ ಪಾತ್ರವೂ ಅಪೂರ್ವವಾಗಿತ್ತು. ನಮ್ಮ ಮಾರ್ಗದರ್ಶಕರಾದ ದೇವೇಗೌಡರೊಂದಿಗೆ ಮನೆಗೆ ತೆರಳಿದಾಗಲೆಲ್ಲ ಅವರು ನೀಡಿದ್ದ ಆತಿಥ್ಯ ಸದಾ ನಮ್ಮ ತಾಯಿಯವರನ್ನು ನೆನಪಿಸಿದಂತಾಗುತ್ತಿತ್ತು. ಅವರ ನೆನಪು ನಮ್ಮೆಲ್ಲರಲ್ಲಿ ಸದಾ ಚಿರಸ್ಮರಣೀಯವಾಗಿರಲಿದೆ. ಶ್ರೀ ದೇವೇಗೌಡರು ಹಾಗೂ ಅವರ ಕುಟುಂಬಕ್ಕೆ ಹಾಗೂ ಅಪಾರ ಬಂಧುಗಳು, ಅಭಿಮಾನಿಗಳಿಗೆ ಆ ಭಗವಂತ ಈ ತೀವ್ರ ದುಃಖದ ಸಂದರ್ಭದಲ್ಲಿ ಹೆಚ್ಚಿನ ಶಕ್ತಿಯನ್ನು ನೀಡಲಿ. ಶ್ರೀಯುತರ ಆತ್ಮಕ್ಕೆ ಭಗವಂತ ಸದ್ಗತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಆತ್ಮಕ್ಕೆ ಚಿರಶಾಂತಿ ನೀಡಲಿ: ಲಕ್ಷ್ಮಿ ಹೆಬ್ಬಾಳ್ಕರ್
ಮಾಜಿ ಪ್ರಧಾನ ಮಂತ್ರಿಗಳಾದ ಶ್ರೀ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ನೋವಾಯಿತು. ಅವರ ಸರಳತೆ, ಸಹನೆ ಹಾಗೂ ತಮ್ಮ ಕುಟುಂಬಕ್ಕೆ ನೀಡಿದ ಅಚಲ ಬೆಂಬಲ ಸದಾ ಸ್ಮರಣೀಯವಾದದ್ದು. ​ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ದೇವೇಗೌಡರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ಈ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

ಎಲೆಮರೆ ಕಾಯಿಯಂತೆ ಇದ್ದವರು: ಬಿವೈ ವಿಜಯೇಂದ್ರ
ಮಾಜಿ ಪ್ರಧಾನಿ ಸನ್ಮಾನ್ಯ ಶ್ರೀ ಅವರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮನವರು ವಿಧಿವಶರಾಗಿರುವುದು ತೀವ್ರ ನೋವನ್ನುಂಟು ಮಾಡಿದೆ. ಆಸ್ಪತೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಾರೆ ಎನ್ನುತ್ತಿರುವಾಗಲೇ ಅವರು ನಮ್ಮೆಲ್ಲರನ್ನು ಅಗಲಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರ ಜೀವನ ಸಂಗಾತಿಯಾಗಿ ಅವರ ಜೀವನದುದ್ದಕ್ಕೂ ಜತೆಗೆ ನಿಂತು ಅವರ ಏಳಿಗೆಗೆ ಎಲೆಮರೆ ಕಾಯಿಯಂತೆ ಇದ್ದವರು. 85 ವರ್ಷಗಳ ಸಾರ್ಥಕ ಬದುಕನ್ನು ನಡೆಸಿದ ಮಾತೃ ಸ್ವರೂಪಿ ಚೆನ್ನಮ್ಮನವರು ನಮ್ಮನೆಲ್ಲ ಅಗಲಿರುವುದು ತುಂಬಾ ನೋವಿನ ಸಂಗತಿ.. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಂಟುಂಬಕ್ಕೆ ಭಗವಂತ ದಯಪಾಲಿಸಲಿ ಎಂದು ಪ್ರಾಥಿಸುತ್ತೇನೆ.

You cannot copy content of this page

Exit mobile version