ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
2022ರ ಮತಾಂತರ ನಿಷೇಧ ಕಾಯ್ದೆಯನ್ನೇ ಮರುಜಾರಿಗೆ ಕಾಂಗ್ರೆಸ್ ಬದ್ಧ: ಬಿ.ಕೆ. ಹರಿಪ್ರಸಾದ್ಕುಮಾರಸ್ವಾಮಿ ನಮಗೇನು ದೊಡ್ಡವರಲ್ಲ, ತಪ್ಪು ಮಾಡಿದರೆ ಶಿಕ್ಷೆಯಾಗಲಿ, ತನಿಖೆ ನಡೆಯಬೇಕು- ಡಿಸಿ ಲತಾಕುಮಾರಿE-ಖಾತಾ ಕಾನೂನು ಉಲ್ಲಂಘನೆ, GBA ಆಯುಕ್ತ ಮಾಗಿ ಹಾಗೂ 31 ಜನರ – ವಿರುದ್ಧ FIR ದಾಖಲುಎಥೆನಾಲ್ ವಿವಾದಕ್ಕೆ ಅಶೋಕ್ ತಿರುಗೇಟು; ಮೈಲೇಜ್ ಇಳಿಕೆಗೆ ರಸ್ತೆ ಗುಂಡಿಗಳೇ ಕಾರಣವೆಂದು ವ್ಯಂಗ್ಯಮಕ್ಕಳಾಗದ ನೋವು ದಾಂಪತ್ಯ ಕಲಹಕ್ಕೆ ಕಾರಣ: ಪತಿಯನ್ನೇ ಚಾಕುವಿನಿಂದ ಇರಿದು ಹತ್ಯೆಗೈದ ಪತ್ನಿ!ಏಳು ಷರತ್ತುಗಳಿಗೆ ಒಪ್ಪಿದರಷ್ಟೇ ಮಾತುಕತೆ: ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ; ಸಂಧಾನಕ್ಕೆ ವ್ಯಾನ್ಸ್ ಪ್ರಯತ್ನಶಿಶುನಾಳ ಶರೀಫರ ತತ್ವಪದಗಳ ಭಾಷಾ ವೈಶಿಷ್ಟ್ಯತೆಸಿಸಿಬಿ ವಿರುದ್ಧ ಕೃಪಾ ಆಳ್ವ ಅಸಮಾಧಾನಸೋನಿಯಾ ಗಾಂಧಿ ಬಗ್ಗೆ ಬಿಜೆಪಿ, ಆರ್‌ಎಸ್‌ಎಸ್‌ ಜೀವನಪೂರ್ತಿ ಸುಳ್ಳುಗಳನ್ನು ಹರಡಿವೆ: ಪ್ರಿಯಾಂಕಾ ಗಾಂಧಿಉತ್ತರ ಪ್ರದೇಶ ಚುನಾವಣೆ: ಓವೈಸಿ–ಚಂದ್ರಶೇಖರ್ ಆಜಾದ್ ಮೈತ್ರಿ ಘೋಷಣೆ; ‘ಸಾಮಾಜಿಕ ಪರಿವರ್ತನಾ ಮೋರ್ಚಾ’ಗೆ ಕಾಂಗ್ರೆಸ್‌, ಎಸ್‌ಪಿಗೂ ಆಹ್ವಾನಬೆಂಗಳೂರು–ಮಂಗಳೂರು–ಗೋವಾ ವಂದೇ ಭಾರತ್‌ ರೈಲು ಟಿಕೆಟ್‌ ಬುಕ್ಕಿಂಗ್‌ ಆರಂಭ: ಮಂಗಳೂರು, ಉಡುಪಿ, ಕುಂದಾಪುರದಿಂದ ಪ್ರಯಾಣ ದರವೆಷ್ಟು?ಹಾಸನದ DC ಕಚೇರಿಯಲ್ಲಿ ಕೋಟ್ಯಂತರ ರೂ. ಅಕ್ರಮ: ತನಿಖೆಗೆ ನಡೆಸುವಂತೆ ಶಾಲಿನಿ ರಜನೀಶ್ ಅವರಿಗೆ ದೂರು ವ್ಯಕ್ತಿ ಅಪಹರಿಸಿ 1.15 ಕೋಟಿ ರೂ. ದರೋಡೆ: ಸಂಚಾರ ಪೊಲೀಸ್ ಸಿಬ್ಬಂದಿ ಜೊತೆ – ಐವರ ಬಂಧನಮೆಟ್ರೋ 3 ನಿಲ್ದಾಣಗಳಲ್ಲಿ ಹೆಸರು ಬದಲಾವಣೆ – ಕೇಂದ್ರ ಅನುಮೋದನೆಕನ್ನಡಿಗರ ನಿಜ ಬದುಕಿನ ಸಮಸ್ಯೆಗಳನ್ನು ಪರಿಹರಿಸದೆ ವಿಶ್ವ ಕನ್ನಡ ಸಮ್ಮೇಳನ ನಡೆಸುವುದರಲ್ಲಿ ಅರ್ಥವಿಲ್ಲ: ಕರವೇ ಅಧ್ಯಕ್ಷ ನಾರಾಯಣ ಗೌಡಜಮ್ಮು-ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ನಾಪತ್ತೆಯಾಗಿದ್ದ ಇಬ್ಬರು ಪೊಲೀಸ್‌ ಸಿಬ್ಬಂದಿಯ ಮೃತದೇಹ ಪತ್ತೆ; ಸೇವಾ ಶಸ್ತ್ರಾಸ್ತ್ರಗಳು ನಾಪತ್ತೆಹಿಂದಿನ ಕಾಲದ ಪಟಾಕಿಗಳು ಕೀಟಗಳನ್ನು ನಾಶಪಡಿಸಿ ವಾತಾವರಣವನ್ನು ಶುದ್ಧಗೊಳಿಸುತ್ತಿದ್ದವು: ಮೋಹನ್‌ ಭಾಗವತ್‌ಇರಾನ್‌ ಯುದ್ಧದ ವಿಚಾರದಲ್ಲಿ ಟ್ರಂಪ್‌–ನೆತನ್ಯಾಹು ನಡುವೆ ಭಿನ್ನಮತ; ದೂರವಾಣಿ ಮಾತುಕತೆಯಲ್ಲಿ ತೀವ್ರ ವಾಗ್ವಾದಮೋದಿಯನ್ನು ಟೀಕಿಸಿದ್ದಕ್ಕಾಗಿ ನನಗೆ ಭಾರತದ ವೀಸಾ ನಿರಾಕರಿಸಲಾಗಿದೆ: ನಾರ್ವೆ ಪತ್ರಕರ್ತೆ ಹೆಲೆ ಲಿಂಗ್‌ಸಿಎಮ್ ಡಿ.ಕೆ. ಶಿವಕುಮಾರ್, ರಾಹುಲ್‌ ಗಾಂಧಿ ಬಳಿ ತನ್ನ ಸ್ಥಾನ ಉಳಿಸಿಕೊಡುವಂತೆ ಗೋಗರೆಯುತ್ತಿದ್ದಾರೆ – ಬಿ ವೈ ವಿಜಯೇಂದ್ರ

ಹಾಸನ ಜಿಲ್ಲಾಧಿಕಾರಿ ವಿರುದ್ಧ ಜೆಡಿಎಸ್ ಶಾಸಕ ಸಿಡಿಮಿಡಿ; ವರ್ಗಾವಣೆಗೆ ಆಗ್ರಹ, ಮುಂದಿನ ಕಾರ್ಯಕ್ರಮಗಳಲ್ಲಿ ವೇದಿಕೆ ಹಂಚಿಕೊಳ್ಳದಿರಲು ನಿರ್ಧಾರ!

PPeepal Media Desk

Peepal Media Desk ರಾಜಕೀಯ, ರಾಜ್ಯ

• 1 ನಿಮಿಷದ ಓದು

ಹಾಸನ ಜಿಲ್ಲಾಧಿಕಾರಿ ವಿರುದ್ಧ ಜೆಡಿಎಸ್ ಶಾಸಕ ಸಿಡಿಮಿಡಿ; ವರ್ಗಾವಣೆಗೆ ಆಗ್ರಹ, ಮುಂದಿನ ಕಾರ್ಯಕ್ರಮಗಳಲ್ಲಿ ವೇದಿಕೆ ಹಂಚಿಕೊಳ್ಳದಿರಲು ನಿರ್ಧಾರ!

ಹಾಸನ: ಹಾಸನಾಂಬೆ ಜಾತ್ರಾ ಮಹೋತ್ಸವದ ನಿರ್ವಹಣೆ ವಿಚಾರವಾಗಿ ಹಾಸನ ಜಿಲ್ಲಾಡಳಿತ ಮತ್ತು ಸ್ಥಳೀಯ ಜನಪ್ರತಿನಿಧಿಗಳ ನಡುವಿನ ಭಿನ್ನಾಭಿಪ್ರಾಯ ಬಹಿರಂಗ ಸಂಘರ್ಷದ ರೂಪ ಪಡೆದುಕೊಂಡಿದೆ. ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರ ಕಾರ್ಯವೈಖರಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹಾಸನ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಘೋಷಿಸಿದ್ದಾರೆ.

ಬುಧವಾರ ಹಾಸನಾಂಬೆ ದೇವಾಲಯದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳು ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುವ ಬದಲು ರಾಜಕೀಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು. ಜಿಲ್ಲಾಧಿಕಾರಿಗಳ ಈ ವರ್ತನೆಯಿಂದ ತಮಗೆ ನೋವಾಗಿದೆ ಎಂದು ಹೇಳಿದ ಶಾಸಕರು, ಅವರನ್ನು ತಕ್ಷಣ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದರು.

ಗೋಲ್ಡ್ ಕಾರ್ಡ್ ವಿಚಾರದಲ್ಲಿ ವಾಗ್ವಾದ
ಹಾಸನಾಂಬೆ ದರ್ಶನೋತ್ಸವದ ಸಂದರ್ಭದಲ್ಲಿ ಗೋಲ್ಡ್ ಕಾರ್ಡ್‌ಗಳ ಹೆಚ್ಚುವರಿ ಮುದ್ರಣ ಮತ್ತು ವಿತರಣೆ ವಿಚಾರ ವಿವಾದಕ್ಕೆ ಕಾರಣವಾಗಿದೆ. ದರ್ಶನೋತ್ಸವ ಆರಂಭವಾದ ಎರಡನೇ ದಿನವೇ ಹೆಚ್ಚುವರಿ ಗೋಲ್ಡ್ ಕಾರ್ಡ್‌ಗಳನ್ನು ಒದಗಿಸುವಂತೆ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಮನವಿ ಮಾಡಿದ್ದೆ. ಆದರೆ ಕಾರ್ಡ್‌ಗಳನ್ನು ಮತ್ತೆ ಮುದ್ರಿಸುವುದಿಲ್ಲ ಎಂದು ಭರವಸೆ ನೀಡಿದ್ದರೂ, ಉತ್ಸವ ಮುಕ್ತಾಯಕ್ಕೆ ಎರಡು ದಿನ ಬಾಕಿ ಇರುವಾಗ ಸುಮಾರು 6 ಸಾವಿರ ಕಾರ್ಡ್‌ಗಳನ್ನು ಮುದ್ರಿಸಿ ಕಾರ್ಯಕರ್ತರಿಗೆ ವಿತರಿಸಲಾಗಿದೆ ಎಂದು ಸ್ವರೂಪ್ ಪ್ರಕಾಶ್ ದೂರಿದ್ದಾರೆ.

ಈ ನಿರ್ಧಾರದಲ್ಲಿ ಸ್ಥಳೀಯ ಶಾಸಕರ ಅಭಿಪ್ರಾಯಕ್ಕೆ ಆದ್ಯತೆ ನೀಡಿಲ್ಲ ಎಂಬುದು ಅವರ ಅಸಮಾಧಾನಕ್ಕೆ ಕಾರಣವಾಗಿದೆ.

ಸಾಮಾಜಿಕ ಜಾಲತಾಣದ ವಿಡಿಯೊ ಬಗ್ಗೆಯೂ ಆಕ್ಷೇಪ
ಜಿಲ್ಲಾಧಿಕಾರಿಗಳ ವಿರುದ್ಧ ತಮ್ಮ ಅಸಮಾಧಾನಕ್ಕೆ ಮತ್ತೊಂದು ಕಾರಣವನ್ನೂ ಶಾಸಕ ಪ್ರಸ್ತಾಪಿಸಿದ್ದಾರೆ. ಸಿಂಹ ಮತ್ತು ನಾಯಿಗೆ ಸಂಬಂಧಿಸಿದ ವಿಡಿಯೊವೊಂದನ್ನು ಸಿದ್ಧಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಚಾರ ತಮಗೆ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಭಕ್ತರಿಗೆ ಪ್ರತ್ಯೇಕ ದರ್ಶನದ ಬೇಡಿಕೆ
ಹಾಸನಾಂಬೆ ದೇವಿಯ ದರ್ಶನಕ್ಕೆ ಬರುವ ಸ್ಥಳೀಯ ಜಿಲ್ಲೆಯ ಭಕ್ತರಿಗೆ ಕನಿಷ್ಠ ಎರಡು ಗಂಟೆಗಳ ಕಾಲ ಪ್ರತ್ಯೇಕ ಅವಕಾಶ ಕಲ್ಪಿಸಬೇಕೆಂದು ಜಿಲ್ಲಾಡಳಿತದ ಗಮನಕ್ಕೆ ತಂದಿದ್ದರೂ ಸ್ಪಂದನೆ ದೊರೆತಿಲ್ಲ ಎಂದು ಶಾಸಕ ಆರೋಪಿಸಿದ್ದಾರೆ.

ಮುಂದಿನ ವರ್ಷವಾದರೂ ಹಾಸನ ಜಿಲ್ಲೆಯ ಭಕ್ತರಿಗೆ ಪ್ರತ್ಯೇಕ ದರ್ಶನದ ವ್ಯವಸ್ಥೆ ಮಾಡಬೇಕು ಎಂಬುದು ತಮ್ಮ ಬೇಡಿಕೆ ಎಂದು ಸ್ಪಷ್ಟಪಡಿಸಿದ್ದಾರೆ. ಭಕ್ತರಿಗೆ ದೇವಿಯ ದರ್ಶನ ಮತ್ತು ಆಶೀರ್ವಾದ ಮುಖ್ಯವೇ ಹೊರತು, ಆದಾಯ ಅಥವಾ ಶಿಷ್ಟಾಚಾರದ ವಿಚಾರಗಳಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಅಧಿಕಾರಿಗಳ ಸನ್ಮಾನ ಕಾರ್ಯಕ್ರಮದಿಂದಲೂ ದೂರ
ಹಾಸನಾಂಬೆ ದರ್ಶನೋತ್ಸವ ಯಶಸ್ವಿಗೊಳಿಸಲು ಸಹಕರಿಸಿದ ಜಿಲ್ಲಾಡಳಿತದ ಅಧಿಕಾರಿಗಳನ್ನು ದೇವಾಲಯದ ಆವರಣದಲ್ಲಿ ಗೌರವಿಸುವ ಕಾರ್ಯಕ್ರಮ ನಡೆದ ಸಂದರ್ಭದಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ವೇದಿಕೆಯ ಹೊರಭಾಗದಲ್ಲಿ ಕುಳಿತಿದ್ದರು. ಜಿಲ್ಲಾಧಿಕಾರಿಗಳೊಂದಿಗಿನ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಅವರ ಈ ನಡೆ ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ಹಾಸನಾಂಬೆ ಉತ್ಸವದ ಯಶಸ್ಸಿನ ನಡುವೆ ಗೋಲ್ಡ್ ಕಾರ್ಡ್ ವಿತರಣೆ, ಸ್ಥಳೀಯ ಭಕ್ತರಿಗೆ ದರ್ಶನದ ಅವಕಾಶ ಹಾಗೂ ಜಿಲ್ಲಾಧಿಕಾರಿಗಳ ಕಾರ್ಯವೈಖರಿ ಕುರಿತ ಅಸಮಾಧಾನ ಈಗ ಹೊಸ ರಾಜಕೀಯ ವಿವಾದಕ್ಕೆ ನಾಂದಿ ಹಾಡಿದೆ. ಜನಪ್ರತಿನಿಧಿ ಮತ್ತು ಜಿಲ್ಲಾಡಳಿತದ ನಡುವಿನ ಈ ಸಂಘರ್ಷ ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು